
ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ಉಸ್ತುವಾರಿ ಮಾಣಿಕ್ ರಾವ್ ಠಾಕ್ರೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು. ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಾಯಕರ ಸೇರ್ಪಡೆಯಿಂದಾಗಿ ಕಾಂಗ್ರೆಸ್ಗೆ ಸ್ವಲ್ಪ ಬಲ ಬದಂತಾಗಿದೆ. ಕೆ. ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರಕ್ಕೆ ತೀವ್ರ ಸವಾಲು ಒಡ್ಡಿ, ಅದನ್ನು ಅಧಿಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ
















