ಮೂಡಿಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿ

ಮೂಡಿಗೆರೆ:  (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ 10 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹೊರಟಿ ಸಮೀಪದಲ್ಲಿ ನಡೆದಿದೆ.

 

ಇದನ್ನೂ ಓದಿ; HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?

ಮೂಡಿಗೆರೆಯಿಂದ ಪ್ಲೇವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೊರಟಿದ್ದ ಲಾರಿ, ಹೊರಟಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಮತ್ತು ಕ್ಲೀನರ್ ಗೆ ಸಣ್ಣಪುಟ್ಟ ಗಾಯವಾಗಿದ್ದು, ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

ಇನ್ನು ಈ ಅವಘಡಕ್ಕೆ ಚಾಲಕನ ಅತಿ ವೇಗ ಕಾರಣ ಎಂದು ಹೇಳಲಾಗುತ್ತಿದೆ. ಸ್ಥಳಲ್ಲೆ ಬಣಕಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ: ತನು ಕೊಟ್ಟಿಗೆಹಾರ

 

ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Nipah Virus: ಕೇರಳಿಗರಿಂದ ಕಾಫಿನಾಡಿಗರಲ್ಲಿ ಹೆಚ್ಚಿದ ನಿಫಾ ವೈರಸ್

 Nipah Virus: ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ, ಮೈಸೂರು, ಚಾಮರಾಜನಗರ ಸೇರಿದಂತೆ ಕಾಫಿನಾಡಿನಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದೆ.

 

ಏನಿದು ನಿಫಾ ವೈರಸ್:
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ನಿಫಾ ಒಂದು ಝೂನೋಟಿಕ್ ವೈರಸ್ – ಅಂದರೆ ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದಾದ ವೈರಸ್ ಆಗಿದೆ. ಇದು ತೀವ್ರವಾದ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ ಮತ್ತು ಅನೇಕ ಸಂದರ್ಭಗಳಲ್ಲಿ ಮೆದುಳಿನ ಮೇಲೂ ದಾಳಿ ಮಾಡುತ್ತದೆ. ಇದರಿಂದ ಸಾವುಗಳೂ ಸಂಭವಿಸುತ್ತದೆ.

ಹಾಗಾದರೆ ನಿಫಾ ವೈರಸ್ ಹೇಗೆ ಹರಡುತ್ತದೆ:
ಪ್ಟೆರೋಪಸ್ ಎಂಬ ಜಾತಿಯ ಬಾವಲಿಗಳ ಮಲ, ಮೂತ್ರ ಅಥವಾ ಲಾಲಾರಸದಿಂದ ಕಲುಷಿತಗೊಂಡಿರುವ ಹಣ್ಣಿನ ಸೇವನೆಯಿಂದ ನಿಫಾ ವೈರಸ್ ಹರಡುತ್ತದೆ ಎಂದು ಭಾವಿಸಲಾಗಿದೆ. ಬಾವಲಿಗಳು ಸೇವಿಸಿದ ಕೊಳೆತ ಹಣ್ಣುಗಳನ್ನು ಸೇವಿಸುವ ಹಂದಿಗಳಿಂದ ಈ ವೈರಸ್ ಮಾನವರಿಗೂ ಹರಡಬಹುದು. ನಂತರ ನಿಫಾ ವೈರಸ್ ಸೋಂಕಿತ ವ್ಯಕ್ತಿಗಳೊಂದಿಗಿನ ನಿಕಟ ಸಂಪರ್ಕದಿಂದಲೂ ಹರಡುತ್ತದೆ. ಈ ಬಗ್ಗೆ ಇನ್ನೂ ಅಧ್ಯಯನಗಳು ನಡೆಯುತ್ತಲೇ ಇವೆ.

ಕಾಫಿನಾಡಿನಲ್ಲಿ ಈ ವೈರಸ್ ಗೆ ( Nipah Virus:) ಭಯ ಯಾಕೆ?;
ಕೇರಳ ರಾಜ್ಯದ ಪ್ರವಾಸಿಗರು ದಿನ ನಿತ್ಯ ಪ್ರವಾಸಿತಾಣಗಳಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಕಚೇರಿ ಸಮೀಪದ ನಗರಸಭೆ ಆವರಣದ ಮರಗಳಲ್ಲಿರುವ ನೂರಾರು ಸಂಖ್ಯೆಯಲ್ಲಿ ಬಾವಲಿಗಳು ವಾಸಿಸುತ್ತಿವೆ. ಹೀಗಾಗಿ ಚಿಕ್ಕಮಗಳೂರು ನಗರದ ಹೃದಯ ಭಾಗದಲ್ಲಿ ನಿಫಾ ವೈರಸ್ ಹರಡುವ ಆತಂಕ ಎದುರಾಗಿದೆ.

 

ಇದನ್ನೂ ಓದಿ; arecanut price: 15 ಸೆಪ್ಟೆಂಬರ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ನಿಫಾ ವೈರಸ್ ಗೆ ಕಾಫಿನಾಡಿನಲ್ಲಿ ಮುಜಾಗ್ರತ ಕ್ರಮ ಏನು?
ಕಾಫಿನಾಡಿನಲ್ಲೂ ನಿಫಾ ವೈರಸ್ ಆತಂಕ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಹೈ ಅಲರ್ಟ್ ಆಗಿದ್ದು, ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ತೆರೆದಿದೆ. ಒಟ್ಟು ಆರು ಹಾಸಿಗೆಯ ವಾರ್ಡ್ ತೆರೆದು ಸಿದ್ಧತೆ ಮಾಡಿಕೊಂಡಿದೆ. ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯವುಳ್ಳ ಹೈಟೆಕ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಜಿಲ್ಲೆಯಲ್ಲಿ ಈವರೆಗೂ ಒಂದೇ ಒಂದು ನಿಫಾ ಪ್ರಕರಣ ಕೂಡ ದಾಖಲಾಗಿಲ್ಲ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.