ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) 2023-24ರ ಶೈಕ್ಷಣಿಕ ಸಾಲಿನಲ್ಲಿ ಶೃಂಗೇರಿಯ ಶ್ರೀ ಜಗದ್ಗುರು ಶ್ರೀಮದಭಿನವ ವಿದ್ಯಾತೀರ್ಥ ಪ್ರೌಢಶಾಲೆಗೆ 100% ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಶ್ರೀಮಠದ ಆಡಳಿತಾಧಿಕಾರಿಗಳಾದ ಪಿ.ಎ.ಮುರಳಿಯವರು ಬೋಧಕ ಹಾಗೂ ಬೋಧಕೇತರ ವರ್ಗದವರನ್ನು ಸನ್ಮಾನಿಸಿದರು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ

ಪ್ರತೀ ವರ್ಷವೂ ಉತ್ತಮ ದಾಖಲೆ ನಿರ್ಮಿಸುತ್ತಿರುವ ಈ ಶಾಲೆ 2023-24ರಲ್ಲಿ 100% ಫಲಿತಾಂಶ ಪಡೆದುಕೊಂಡಿದೆ. ಇದಕ್ಕೆ ಕಾರಣೀಭೂತರಾದ ಬೋಧಕ ಹಾಗೂ ಬೋಧಕೇತರ ವರ್ಗವನ್ನು ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶ್ರೀಮಠದ ಆಡಳಿತಾಧಿಕಾರಿಗಳಾದ ಪಿ. ಎ. ಮುರಳಿಯವರು ಸನ್ಮಾನಿಸಿದರು.
ಇದನ್ನೂ ಓದಿ: ಈ ಯೋಜನೆಯಲ್ಲಿ ಶೇ. 60% ರಷ್ಟು ಸಹಾಯಧನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಈ ಸಂದರ್ಭದಲ್ಲಿ ಶಾಲಾ ಖಜಾಂಚಿಗಳಾದ ಹೆಚ್. ಸಿ ಸತೀಶ್, ಮುಖಂಡರಾದ ಪರಾಶರ, ಕೇಶವಮೂರ್ತಿ, ನಾರಾಯಣ ಸ್ವಾಮಿ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
ಇದನ್ನೂ ಓದಿ: SBI ಯಲ್ಲಿ ಜಾಬ್ ಆಫರ್; 17,900 ಸಂಬಳ, ವಿದ್ಯಾರ್ಹತೆ, ಅರ್ಜಿ ಲಿಂಕ್ ಇಲ್ಲಿದೆ












