
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಜಯಭಾರತೀ ವಿದ್ಯಾಲಯವು 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿದೆ.
ಈ ಬಾರಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಯು ಶೈಕ್ಷಣಿಕ ಸಾಧನೆಯಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಒಟ್ಟು 23 ಮಂದಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್), 19 ಮಂದಿ ಪ್ರಥಮ ಶ್ರೇಣಿಯಲ್ಲಿ ಮತ್ತು 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ಪ್ರಥಮ ಸ್ಥಾನವನ್ನು ಸಾತ್ವಿಕ್ ಹರಿತಾಸ ಯುಎಸ್ 608 ಅಂಕಗಳು (97.2%) ಗಳಿಸಿ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ರುತ್ವಿಕ್ ಎಂ.ಆರ್ 602 ಅಂಕಗಳು (96.3%) ಗಳಿಸಿ ಪಡೆದುಕೊಂಡಿದ್ದಾರೆ. ತೃತೀಯ ಸ್ಥಾನವನ್ನು ಸೋಹನ್ ಕೆ.ಎಂ ಹಾಗೂ ಅಪೇಕ್ಷಾ ಪಿ.ಎಸ್ ಇಬ್ಬರೂ 597 ಅಂಕಗಳು (95.5%) ಗಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನವೇ ಈ ಸಾಧನೆಗೆ ಕಾರಣವೆಂದು ತಿಳಿಸಿದ್ದಾರೆ.













