ಕಳಸ: ಜೆಇಎಂ ಪ್ರೌಢಶಾಲೆಗೆ ಶೇ.100 ಎಸ್‌ಎಸ್‌ಎಲ್‌ಸಿ ಫಲಿತಾಂಶ, ಸಿದ್ಧಾಂತ್ ಪ್ರಭುಗೆ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ

ಕಳಸ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಜೆಇಎಂ ಪ್ರೌಢಶಾಲೆ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿ ಶ್ಲಾಘನೀಯ ಸಾಧನೆ ಮಾಡಿದೆ.

ಈ ಬಾರಿ ಒಟ್ಟು 54 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 18 ಮಂದಿ A+ ಗ್ರೇಡ್, 14 ಮಂದಿ A ಗ್ರೇಡ್, 15 ಮಂದಿ B+ ಗ್ರೇಡ್ ಹಾಗೂ 7 ಮಂದಿ B ಗ್ರೇಡ್‌ನಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ಕೆ.ಪಿ. ಸಿದ್ಧಾಂತ್ ಪ್ರಭು 619 ಅಂಕಗಳು (99.04%) ಗಳಿಸಿ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ ಪಡೆದುಕೊಂಡು ವಿಶೇಷ ಸಾಧನೆ ಮಾಡಿದ್ದಾರೆ. ಅವರ ಸಾಧನೆ ಶಾಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜೊತೆಗೆ, ಆರೂಷಿ ಹೆಬ್ಬಾರ್ ಕೆ.ಎ 607 ಅಂಕಗಳು (97.12%) ಹಾಗೂ ಅರ್ಹಾನ್ ಎಚ್.ಜೆ 601 ಅಂಕಗಳು (96.16%) ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು, ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದಿಂದ ಈ ಯಶಸ್ಸು ಸಾಧ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.