ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಗೌಡಹಳ್ಳಿ ಹೊರಟ್ಟಿ ಗ್ರಾಮದಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತು.
ಹೊರಟ್ಟಿ ಗ್ರಾಮದ ಜಿ.ಆರ್. ಪ್ರದೀಪ್ ಅವರ ಮನೆಯ ಸಮೀಪದ ತೋಟದಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ತಕ್ಷಣ ಮನೆಯ ಮಾಲೀಕರು ಉರಗ ರಕ್ಷಕ ಸ್ನೇಕ್ ಮೊಹಮ್ಮದ್ ಅವರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬಂದ ಮೊಹಮ್ಮದ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದರು. ಬಳಿಕ, ಅರಣ್ಯ ಇಲಾಖೆಯ ಮಾರ್ಗಸೂಚಿಯಂತೆ ಸರ್ಪವನ್ನು ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಬಿಡಲಾಯಿತು.
ಕಳೆದ ಕೆಲವು ದಿನಗಳಿಂದ ಕಾಳಿಂಗ ಸರ್ಪವು ಗ್ರಾಮದ ವಿವಿಧೆಡೆ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು. ಇದೀಗ ಸರ್ಪವನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಡಲಾಗಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಯಿತು.
ಮೂಡಿಗೆರೆ: 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ













