ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಗೆ 150 ಹೊಸ ಬಿಎಸ್ಎನ್ಎಲ್ ಟವರ್ ಮಂಜೂರಾಗಿದ್ದು, 50 ಬ್ಯಾಟರಿಗಳು ಚಿಕ್ಕಮಗಳೂರು ಜಿಲ್ಲೆಗೆ ಬಂದಿದೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ

ರಾಜ್ಯಕ್ಕೆ ಒಟ್ಟು 90 ಬ್ಯಾಟರಿಗಳು ಮಂಜೂರಾಗಿದ್ದು, ಅದರಲ್ಲಿ ಸಿಂಹಪಾಲು 50 ಬ್ಯಾಟರಿಗಳು ಚಿಕ್ಕಮಗಳೂರು ಜಿಲ್ಲೆಗೆ ಬಂದಿವೆ. ನ್ನೂ 25 ಬ್ಯಾಟರಿಗಳಿಗೆ ಬೇಡಿಕೆ ಇಟ್ಟಿದ್ದು ಅದೂ ಮಂಜೂರಾಗುವ ವಿಶ್ವಾಸವಿದೆ.
ನಿಯಮದ ಪ್ರಕಾರ 500 ಮನೆಗಳಿಗೆ ಒಂದು ಟವರ್ ನೀಡಲಾಗುತ್ತದೆ. ಆದರೆ ಮಲೆನಾಡಿನಲ್ಲಿ ದೂರ ದೂರ ಮನೆಗಳು ಇರುವುದರಿಂದ 300 ಮನೆಗೊಂದು ಟವರ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಟವರ್ಗಳಿಗೆ ವಿದ್ಯುತ್ ಸಮಸ್ಯೆ ಇದ್ದು, ಮೆಸ್ಕಾಂ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿ ಯಾವುದೇ ಕಾರಣಕ್ಕೂ ವಿದ್ಯುತ್ ಸ್ಥಗಿತ ಆಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
217 ಟವರ್ಗಳಲ್ಲಿ ಈಗಾಗಲೇ 190 ಟವರ್ಗಳನ್ನು 4ಜಿ ದರ್ಜೆಗೇರಿಸಲಾಗಿದೆ. ಇನ್ನುಳಿದ ಟವರ್ ಗಳನ್ನೂ 4g ದರ್ಜೆಗೇರಿಸುವ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಬಿಎಸ್ಎನ್ಎಲ್ ಟವರ್ಗೆ ಸ್ಯಾಟಲೈಟ್ ಸೌಲಭ್ಯ ಒದಗಿಸಲಾಗಿದೆ. ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಭಾಗಶಃ ಟವರ್ಗಳಿಗೆ ಈ ವ್ಯವಸ್ಥೆ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ.
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾಗಶಃ ನೆಟ್ವರ್ಕ್ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಅದಾಗ್ಯೂ ಜನರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಬಿಎಸ್ಎನ್ಎಲ್ ಅಧಿಕಾರಿಗಳು ಹಾಗೂ ಜಿಲ್ಲೆಯ ಬಿಎಸ್ಎನ್ಎಲ್ ಸಲಹಾ ಸಮಿತಿಯ ಸದಸ್ಯರು ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.












