ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ 2 ತಿಂಗಳ ಮಗು ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಶೇಖರ್ ದಂಪತಿಯ 2 ತಿಂಗಳ 10 ದಿನದ ಮಗು ತೀವ್ರ ಜ್ವರ, ಕಫದ ಸಮಸ್ಯೆಯಿಂದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಿಲ್ಲದ ಕಾರಣ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ.
ಸುಮಾರು ಅರ್ಧ ಗಂಟೆ ಕಾದರು ಕೂಡ ಆಂಬುಲೆನ್ಸ್ ಬರಲಿಲ್ಲ. ಜೊತೆಗೆ ವೈದ್ಯರು ಚಿಕಿತ್ಸೆ ನೀಡಲಿಲ್ಲ. ಹೀಗಾಗಿ ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಹಾಗೂ ಆಕ್ಸಿಜನ್ ಸಿಗದೆ ಮಗು ಸಾವನ್ನಪ್ಪಿದ್ದು, ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!












