ಕಾಡಾನೆ ದಾಳಿಗೆ ಮಹಿಳೆ ಬಲಿ ಪ್ರತಿಭಟನೆ ಪ್ರಕರಣ: ಬಾಳೆಹೊನ್ನೂರು ಠಾಣೆಯಲ್ಲಿ 2 ಪ್ರತ್ಯೇಕ FIR ದಾಖಲು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಯಲ್ಲಿ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆ ಪ್ರಕರಣದಲ್ಲಿ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು FIRಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ರಾಜ್ಯ ಹೆದ್ದಾರಿಯಲ್ಲಿ ಇಟ್ಟುಕೊಂಡು ಬೆಳಗ್ಗೆಯಿಂದ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ 29ಕ್ಕೂ ಅಧಿಕ ಜನರ ಮೇಲೆ ಸುಮೋಟೋ ಕೇಸ್ ದಾಖಲಿಸಲಾಗಿದೆ.

ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ PSI ಅಂಬರೀಶ್ ನೀಡಿದ ದೂರಿನ ಮೇರೆಗೆ FIR ದಾಖಲು ಮಾಡಿದ್ದು, 10ಕ್ಕೂ ಅಧಿಕ ಪೊಲೀಸರಿಗೆ ಗಾಯ ಎಂದು FIR ನಲ್ಲಿ ಉಲ್ಲೇಖ ಮಾಡಲಾಗಿದೆ. ಹಾಗೆ ಕಲ್ಲು ತೂರಾಟದಿಂದ ಪೊಲೀಸ್ ಸಿಬ್ಬಂದಿಗಳಿಗೆ ಗಾಯವಾಗಿದ್ದು, ಆಕ್ರೋಶಗೊಂಡ ಹೋರಾಟಗಾರರಿಂದ ರಸ್ತೆ ತಡೆ, ಪೊಲೀಸರ ಮೇಲೆ ಕಲ್ಲು ತೂರಾಟ ಅಲ್ಲದೆ DAR ವಾಹನ ಪಲ್ಟಿ ಮಾಡಲು ಯತ್ನ ಎಂದು ಉಲ್ಲೇಖಿಸಿ BNS 353(b), 195,57,132,126(2),191(2)190 ಸೆಕ್ಷನ್ ಅಡಿ ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಚಂದ್ರಶೇಖರ್ ರೈ ಅಭಿಷೇಕ್, ಮಂಜು ಪ್ರವೀಣ್ ಖಾಂಡ್ಯ ಆದರ್ಶ, ಕಾರ್ತಿಕ್ ಸೇರಿ 29 ಜನರು ಮತ್ತು ಇತರರ ಮೇಲೆ ಕೇಸ್ ದಾಖಲಿಸಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.