ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಗೋಣಿಬೀಡು – ಬೇಲೂರು ರಸ್ತೆಯಲ್ಲಿ ಸುಮಾರು 20 ಕಾಡಾನೆಗಳ ಹಿಂಡು ಸಂಚರಿಸುತ್ತಿರುವುದು ಕಂಡುಬಂದಿದೆ.
ಇದನ್ನೂ ಓದಿ: ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು, 15,397 ಸಂಬಳ

ಕಾಫಿ ತೋಟದಿಂದ ರಸ್ತೆ ದಾಟಿ ಮತ್ತೊಂದು ತೋಟಕ್ಕೆ ಕಾಡಾನೆಗಳು ಸಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕಾಡಾನೆಗಳ ಈ ಓಡಾಟದಿಂದ ಗೋಣಿಬೀಡು, ಜಿ. ಹೊಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಈ ಘಟನೆ ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಗ್ರಾಮಸ್ಥರು ರಾತ್ರಿ ವೇಳೆ ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸಿಬ್ಬಂದಿ ಸೂಚಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಸಿಗರೇಟ್ ಸೇದಿದ್ರೆ ರಿಲ್ಯಾಕ್ಸ್ ಸಿಗಲ್ಲ; ಭಯಾನಕ ಸತ್ಯ ಬಯಲು!













