ಅಡಿಕೆಗೆ ಬಾಧಿಸುತ್ತಿರುವ ಎಲೆ ಚುಕ್ಕೆ ರೋಗ ಮತ್ತು ಹಳದಿ ಎಲೆ ರೋಗಗಳ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ವೈಜ್ಞಾನಿಕ ತಂಡದ ಸಮಿತಿಯ ಶಿಫಾರಸಿನ ಅನ್ವಯ 54,000 ಹೆಕ್ಟೇರ್ ಪ್ರದೇಶಕ್ಕೆ ₹225.73 ಕೋಟಿ ಪ್ರಸ್ತಾವ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತೋಟಗಾರಿಕಾ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್ ತಿಳಿಸಿದರು.
ಇದನ್ನೂ ಓದಿ; SC/ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ; ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ವೈಜ್ಞಾನಿಕ ತಂಡದ ಸಮಿತಿಯು ರೋಗಬಾಧಿತ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ಎಲೆ ಚುಕ್ಕೆ ರೋಗದ ಹರಡುವಿಕೆಗೆ ಪ್ರಮುಖ ಕಾರಣಗಳು, ರೋಗದ ತೀವ್ರತೆ ಮತ್ತು ಹಾನಿಯ ಪ್ರಮಾಣದ ಬಗ್ಗೆ ಪರಿಶೀಲಿಸಿದೆ. ಸಮಿತಿಯ ಶಿಫಾರಸಿನಂತೆ ಫೈಟೋಸ್ಕಾನಿಟರಿ ಕ್ರಮಗಳ ಅಳವಡಿಕೆ, ಪೋಷಕಾಂಶಗಳ ನಿರ್ವಹಣೆ, ಸಸ್ಯ ಸಂರಕ್ಷಣೆ ಕ್ರಮಗಳ ಅಳವಡಿಕೆ ಹಾಗೂ ತಾಂತ್ರಿಕ ಮಾಹಿತಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ₹225.73 ಕೋಟಿ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ವಿವರಿಸಿದರು.
ಇದನ್ನೂ ಓದಿ; ಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದು!; ಇಲ್ಲಿದೆ ಮಹತ್ವದ ಮಾಹಿತಿ…
ಈ ಪ್ರಸ್ತಾವವನ್ನು ಕೇಂದ್ರ ಮತ್ತು ರಾಜ್ಯಗಳ 60:40 ಅನುಪಾತದಲ್ಲಿ 2 ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲಾಗುವುದು. 2024-25ನೇ ಸಾಲಿಗೆ ₹112.83 ಕೋಟಿಗಳಿಗೆ ಪ್ರಸ್ತಾವ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಮಲ್ಲಿಕಾರ್ಜುನ್ ತಿಳಿಸಿದರು.
ಇದನ್ನೂ ಓದಿ; ಆಧಾರ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಓದಿ; ಈ ಕೆಲಸ ಮಾಡಲು ಇಂದು ಕೊನೆಯ ದಿನ












