ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಎತ್ತಿನಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಿನ್ನೆ ನಡೆದಿದೆ. ಭರತ್ (25) ಮೃತ ಪಟ್ಟ ಯುವಕ.
ಇದನ್ನೂ ಓದಿ; ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 09-09-2023

ಅಜ್ಜಂಪುರದಲ್ಲಿ ಜೋಡಿ ಎತ್ತಿನಗಾಡಿ ಸ್ಪರ್ಧೆ ನಡೆಯುತ್ತಿತ್ತು. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಘಟನೆ ನಡೆದಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.09.2023
ಫೈನಲ್ ಸುತ್ತಿನ ಅಂತಿಮ ಸ್ಪರ್ಧೆಯಲ್ಲಿ ನೊಗ ಹಿಡಿಯಲು ಭರತ್ ಹೋಗಿದ್ದ ಈ ವೇಳೆ ವೇಗವಾಗಿದ್ದ ಎತ್ತಿನಗಾಡಿ ನೊಗ ತಲೆಗೆ ಹೊಡೆದು ಸಾವನ್ನಪ್ಪಿದ್ದಾನೆ.
Chikkamagaluru: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ, ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ನಲ್ಲಿ ಬುಧವಾರ ಸಂಜೆ ನಡೆದಿದೆ.
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನಿರಂಜನ್(47), ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಢಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಶಾಲಾ ಮಕ್ಕಳ ಮೇಲೆ ಹರಿದ ಬಸ್ | ಓರ್ವ ವಿದ್ಯಾರ್ಥಿನಿ ಸಾವು, ಒಬ್ಬರು ಗಂಭೀರ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಚಲಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು, ಅದರಲ್ಲಿ ಓರ್ವ ವಿದ್ಯಾರ್ಥಿ ಇದೀಗ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ಬಳಿ ನಡೆದಿದೆ.
ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ಏಕಾಏಕಿ ಮಕ್ಕಳ ಮೇಲೆ ಹರಿದಿದೆ. ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದರು, ಆದರೆ ತುಳಸಿ (15) ಹಾಗೂ ನಿವೇದಿತ (14) ಸ್ಥಿತಿ ಗಂಭೀರವಾಗಿ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾಳೆ.
ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತುಳಸಿ, ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು-ಲತಾ ದಂಪತಿಯ ಪುತ್ರಿಯಾಗಿದ್ದಾಳೆ.












