
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 29 ವರ್ಷದ ಯುವಕನೊಬ್ಬ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕಿನಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಮೃತ ಯುವಕ ಕಳೆದ ಜನವರಿ 20ರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದ್ದರೂ, ಜ್ವರದ ತೀವ್ರತೆ ಕ್ರಮೇಣ ಹೆಚ್ಚುತ್ತಲೇ ಸಾಗಿತ್ತು. ರೋಗಲಕ್ಷಣಗಳು ಗಂಭೀರಗೊಂಡ ಹಿನ್ನೆಲೆಯಲ್ಲಿ, ಕಳೆದ ಭಾನುವಾರ ಹೆಚ್ಚಿನ ಚಿಕಿತ್ಸೆಗೆಂದು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಸತತವಾಗಿ ಚಿಕಿತ್ಸೆ ನೀಡಿದರೂ, ಸೋಂಕಿನ ತೀವ್ರತೆಯಿಂದಾಗಿ ಇಂದು ಚಿಕಿತ್ಸೆ ಫಲಿಸದೆ ಯುವಕ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ತೀರ್ಥಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ.













