ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಸ್ಪರ್ಶಕ್ಕೆ ಮೂರು ಹಸುಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವರಿಗೆ ಸೇರಿದ ಮೂರು ಜರ್ಸಿ ಹಸುಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ.
ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಆಕಸ್ಮಿಕ ವಿದ್ಯುತ್ ತಗುಲಿ ಹಸುಗಳು ಅಸುನೀಗಿವೆ ಎಂದು ಹೇಳಲಾಗುತ್ತಿದೆ. ಸುಮಾರು 2 ಲಕ್ಷಕ್ಕೂ ಅಧಿಕ ನಷ್ಟವುಂಟಾಗಿದ್ದು, ಹಸುಗಳು ಸಾವನ್ನಪ್ಪಿರುವುದರಿಂದ ರೈತ ಗೋಪಾಲಗೌಡ ಕುಟುಂಬದವರು ಕಂಗಾಲಾಗಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರಿಗೆ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












