ಶೃಂಗೇರಿಯಲ್ಲಿ ಮೂರು ದಿನದಲ್ಲಿ 3 ಸೂಸೈಡ್

ಶೃಂಗೇರಿಯಲ್ಲಿ ವ್ಯಕ್ತಿ ಆತ್ಮಹತ್ಯೆ
ಶೃಂಗೇರಿ: ಪಟ್ಟಣದ ಕಾಂಚಿನಗರದಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ಅನಿಲ್ ಕುಮಾರ್ (37) ಎಂದು ಗುರುತಿಸಲಾಗಿದೆ. ಅವರು ಶೃಂಗೇರಿ ಸುತ್ತಮುತ್ತ ಕೂಲಿ ಕೆಲಸ ಮಾಡಿಕೊಂಡು ಕಾಂಚಿನಗರದಲ್ಲಿರುವ ತಮ್ಮ ಸ್ವಂತ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು.

ಜುಲೈ 6ರಂದು ಸಂಜೆ ಸುಮಾರು 7 ಗಂಟೆಗೆ ಮೃತರನ್ನು ಕೊನೆಯದಾಗಿ ಅವರ ಸಹೋದರ ನೋಡಿದ್ದರು. ಬಳಿಕ ಜುಲೈ 12ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರ ತಾಯಿ ನೀಡಿದ ದೂರಿನ ಪ್ರಕಾರ, ಹಲವು ವರ್ಷಗಳಿಂದ ಮದ್ಯಪಾನದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಾಲದ ಹೊರೆ ತಾಳಲಾರದೆ ಮಹಿಳೆ ಆತ್ಮಹತ್ಯೆ
ಶೃಂಗೇರಿ: ಸಾಲದ ಹೊರೆ ಮತ್ತು ಆರ್ಥಿಕ ಸಂಕಷ್ಟದಿಂದ ಜಿಗುಪ್ಸೆಗೊಂಡು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿಯಲ್ಲಿ ನಡೆದಿದೆ.

ಮೃತರನ್ನು ಶ್ವೇತಾ (39) ಎಂದು ಗುರುತಿಸಲಾಗಿದೆ. ಅವರು ತಮ್ಮ ಮನೆಯ ಹಾಲ್‌ನಲ್ಲಿ ಸೀರೆಯಿಂದ ಮರದ ಪಿಕಾಸಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳದಲ್ಲಿ, “ನನ್ನ ಸಾವಿಗೆ ನಾನೇ ಕಾರಣ, ಯಾರೂ ಅಲ್ಲ. ಸ್ವಾರಿ ಮಕ್ಕಳೇ” ಎಂದು ಬರೆದಿದ್ದ ಆತ್ಮಹತ್ಯೆ ಪತ್ರವೂ ಪತ್ತೆಯಾಗಿದೆ.

ಮೃತರ ತಂದೆ ನೀಡಿದ ದೂರಿನ ಪ್ರಕಾರ, ಕುಟುಂಬ ನಿರ್ವಹಣೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಾಡಿದ್ದ ಸಾಲವನ್ನು ತೀರಿಸಲು ಸಾಧ್ಯವಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಶೃಂಗೇರಿ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.


ತುಂಗಾ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ
ಶೃಂಗೇರಿ: ಪಟ್ಟಣದ ಕುರುಬಗೆರೆಯ ಸಮೀಪ ತುಂಗಾ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.

ಮೃತರನ್ನು ನಾಗೇಶ್ ಎಂದು ಗುರುತಿಸಲಾಗಿದೆ. ಅವರು ಜುಲೈ 9ರಂದು ಸಂಜೆ ಶೃಂಗೇರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದು,
ಬಳಿಕ ಮನೆಗೆ ಮರಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕಾಣೆ ಪ್ರಕರಣ ದಾಖಲಿಸಿದ್ದರು.

ಭಾನುವಾರ ಸಂಜೆ ಕುರುಬಗೆರೆಯ ರಾಘು ಅವರ ಟೈರ್ ಅಂಗಡಿ ಹಿಂಭಾಗದ ತುಂಗಾ ನದಿಯ ದಂಡೆಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ತೆರಳಿದ ಪತ್ನಿ ಮೃತದೇಹವನ್ನು ನಾಗೇಶ್ ಅವರದ್ದೆಂದು ಗುರುತಿಸಿದ್ದಾರೆ.

ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ನಾಗೇಶ್ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಇದೇ ಕಾರಣದಿಂದ ತುಂಗಾ ನದಿಗೆ ಹಾರಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.