ಚಿಕ್ಕಮಗಳೂರು: ಜನ್‌ಜಾತೀಯ ಉನ್ನತ್ ಯೋಜನೆಗೆ ಜಿಲ್ಲೆಯ 3 ಗ್ರಾಮಗಳು ಆಯ್ಕೆ: ಕೋಟಾ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರಧಾನ ಮಂತ್ರಿ ಜನ್‌ಜಾತೀಯ ಉನ್ನತ್ ಗ್ರಾಮ ಅಭಿಯಾನ ಯೋಜನೆಗೆ ಜಿಲ್ಲೆಯ 3 ಗ್ರಾಮಗಳು ಆಯ್ಕೆಯಾಗಿದೆ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.


ಇದನ್ನೂ ಓದಿ; Bigg Boss Kannada:ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ರಿವೀಲ್!


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 3 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನ್‌ಜಾತೀಯ ಉನ್ನತ್ ಗ್ರಾಮ ಅಭಿಯಾನ ಯೋಜನೆಗೆ ಆಯ್ಕೆಯಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾ.ಪಂಯ ಮಲ್ನಾಡು ಗ್ರಾಮ, ಕೊಪ್ಪ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯಿತಿಯ ಮೇಗೂರು ಗ್ರಾಮ ಹಾಗೂ ಅಜ್ಜಂಪುರ ತಾಲೂಕಿನ ಬೇಗೂರು ಗ್ರಾ.ಪಂಯ ಭೂತನಹಳ್ಳಿ ಗ್ರಾಮಗಳು ಆಯ್ಕೆಯಾಗಿದೆ.


ಇದನ್ನೂ ಓದಿ; ಮುಡಾ ಕೇಸ್: ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಜಾ


ಪ್ರಧಾನ ಮಂತ್ರಿ ಜನ್‌ಜಾತೀಯ ಉನ್ನತ್ ಗ್ರಾಮ ಅಭಿಯಾನ ಯೋಜನೆಯೂ 63 ಸಾವಿರ ಬುಡಕಟ್ಟು ಗ್ರಾಮಗಳನ್ನು ಒಳಗೊಂಡಿದ್ದು, ಐದು ಕೋಟಿ ಬುಡಕಟ್ಟು ಜನರಿಗೆ ಸವಲತ್ತುಗಳನ್ನು ನೀಡುತ್ತದೆ. ಅಲ್ಲದೆ ಸಾಮಾಜಿಕ, ಆರ್ಥಿಕ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಿದ್ದು, ಪ್ರತಿ ಪರಿಶಿಷ್ಟ ವರ್ಗದ ಕಾಲೊನಿಯನ್ನು 20.39 ಲಕ್ಷ ರೂ.ಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಸೆಪ್ಟೆಂಬರ್ ಅಂತ್ಯದೊಳಗೆ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಮಲ್ನಾಡು ಗ್ರಾಮ, ಮೇಗೂರು ಗ್ರಾಮ, ಭೂತನಹಳ್ಳಿ ಗ್ರಾಮಗಳಲ್ಲಿ ಸಂಬಂಧಪಟ್ಟ ಇಲಾಖೆಗಳು ಸರ್ವೆ ಕಾರ್ಯ ಕೈಗೊಂಡು ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.


ಇದನ್ನೂ ಓದಿ; ರಾಜ್ಯದಲ್ಲಿ ಒನ್ ನೇಷನ್ ಒನ್ ಕಾರ್ಡ್ ಯೋಜನೆ ಜಾರಿ; ಏನಿದು? ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.