ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ರಾಷ್ಟ್ರೀಯ ಹೆದ್ದಾರಿ 206ರ ಬೈಪಾಸ್ ಸಮೀಪದ ಭದ್ರಾ ಮೇಲ್ದಂಡೆ ನಾಲೆ ಬಳಿ ಕೊಳೆತ ಸ್ಥಿತಿಯಲ್ಲಿದ್ದ 30ಕ್ಕೂ ಅಧಿಕ ಚೀಲ ಗೋಧಿ ಪತ್ತೆಯಾಗಿದೆ.
ತಾಲ್ಲೂಕಿನ ದೋರನಾಳು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಬಳಿ ಸುಮಾರು 80 ಚೀಲ ಗೋಧಿ ಹೂತಿಟ್ಟಿದ್ದ ಪ್ರಕರಣ ಕಳೆದ ತಿಂಗಳು ಪತ್ತೆಯಾಗಿತ್ತು. ಇದು ತನಿಖಾ ಹಂತದಲ್ಲಿ ಇರುವಾಗಲೇ ಮತ್ತೊಂದು ಪ್ರಕರಣ ಗೊತ್ತಾಗಿದೆ. ಆ ಶಾಲೆಯಿಂದ ನಾಲೈದು ಕಿ.ಮೀ. ಅಂತರದಲ್ಲಿ ಈ ಪ್ರಕರಣ ನಡೆದಿದೆ ಎಂದು ಮುಖಂಡ ರಮೇಶ್ ಗೋವಿಂದೇಗೌಡ ತಿಳಿಸಿದ್ದಾರೆ.

ಈ ಗೋಧಿ ಸರ್ಕಾರಿ ವಸತಿ ಶಾಲೆಗಳಿಗೆ ಸಂಬಂಧಿಸಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

















