ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಹೇಳಿಕೆ ಬೆನ್ನಲ್ಲೇ ಇದೀಗ ಗಂಭೀರ ಚರ್ಚೆಗಳು ಆರಂಭವಾಗಿವೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ

ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಚಾರ್ಮಾಡಿ ಘಾಟಿಯಲ್ಲಿ 75 ಕಿಲೋ ಮೀಟರ್ ರಸ್ತೆ ಅಭಿವೃದ್ದಿ ಪಡೆಸಲು ಹಣ ಬಿಡುಗಡೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೆ ಹೋರಾಟದ ರೂಪುರೇಷೆ ನಿರ್ಧರಿಸಲು ಸಭೆ ಮಾಡಲು ಚಿಂತನೆ ನಡೆಸಾಗಿದೆ.
ಇದನ್ನೂ ಓದಿ; ಪೋಷಕರ ಗಮನಕ್ಕೆ; ಸುಕನ್ಯಾ ಸಮೃದ್ಧಿ ಯೋಜನೆಯ ಕುರಿತು ಪೋಷಕರಿಗೆ ಮುಖ್ಯ ಮಾಹಿತಿ
ಡಬಲ್ ರೋಡ್ ಮಾಡಲು ಜಾಗಾನೇ ಇಲ್ಲ, ಸ್ವಲ್ಪ ಜಾಸ್ತಿ ಹಣ ಆದರೂ ಪರವಾಗಿಲ್ಲ ಉತ್ತಮವಾದ ಸುರಂಗ ಮಾರ್ಗನೋ ಅಥವಾ ಫ್ಲೈ ಓವರ್ ರೀತಿಯ ಕ್ರಿಯಾ ಯೋಜನೆ ಮಾಡಿ, ರಸ್ತೆ ಕಾಮಗಾರಿ ನೆಪದಲ್ಲಿ ಪರಿಸರಕ್ಕೆ ಮಾರಕವಾಗಬಾರದು.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಆರಂಭ; ಬೆಲೆ ಎಷ್ಟು ನಿಗದಿ… ಇಲ್ಲಿದೆ ಡಿಟೈಲ್ಸ್
ಮೊದಲು ಗುಂಡಿ ಮುಚ್ಚಿ, ಡಬಲ್ ರಸ್ತೆ ಬೇಕಾಗಿಲ್ಲ ಎಂಬ ಒತ್ತಾಯವು ಕೇಳಿ ಬಂದಿದೆ. ಜೊತೆಗೆ ಡಬಲ್ ರಸ್ತೆ ವಿರುದ್ದ ಹೋರಾಟದ ರೂಪುರೇಷೆ ನಿರ್ಧರಿಸಲು ಸಭೆಗೆ ಕರೆ ನೀಡಲಾಗಿದೆ ಎನ್ನಲಾಗಿದೆ.












