ಕಳಸ : (ನ್ಯೂಸ್ ಮಲ್ನಾಡ್ ವರದಿ) ಕಾಡಿನಿಂದ ನಾಡಿಗೆ ಬಂದಿದ್ದ ಕುರುಡು ಕಾಡುಕೋಣವೊಂದು ದಾರಿ ಕಾಣದೆ ರಸ್ತೆ ಬದಿಯಲ್ಲಿ ನಿಂತು ಪರದಾಡಿದ ಘಟನೆ ಕಳಸ ತಾಲೂಕಿನ ಕಲ್ಮಕ್ಕಿ-ಕೋಣೆಬೈಲ್ ಗ್ರಾಮದ ಬಳಿ ಇಂದು ನಡೆದಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ

ದೃಷ್ಟಿ ಇಲ್ಲದ ಕಾರಣ ಮುಂದಕ್ಕೆ ಸಾಗಲು ಸಾಧ್ಯವಾಗದೆ ಕಾಡುಕೋಣ ರಸ್ತೆ ಬದಿಯಲ್ಲೇ ನಿಂತು ನರಳಾಡುತ್ತಿರುವ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಕಾಡುಕೋಣವನ್ನು ಓಡಿಸಲು ಕೆಲವರು ಕೂಗಾಡಿ, ಪಟಾಕಿ ಸಿಡಿಸಿದರೂ ಅದು ನಿಂತ ಸ್ಥಳವನ್ನು ಬಿಟ್ಟು ಕದಲಲಿಲ್ಲ.
ಇದನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10th & PUC ಪಾಸ್ ಆದವರು ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಕಾಡುಕೋಣದ ಅಸಹಾಯಕ ಸ್ಥಿತಿಯನ್ನು ಗಮನಿಸಿದ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.














