ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಚಲಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು, ಅದರಲ್ಲಿ ಓರ್ವ ವಿದ್ಯಾರ್ಥಿ ಇದೀಗ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ಬಳಿ ನಡೆದಿದೆ.
ಇದನ್ನೂ ಓದಿ; ಪ್ರಧಾನಿ ಮೋದಿ ಭದ್ರತೆಗಿರುವ spg ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ಸಾವು; ಏನಿದು ದೇಶದಲ್ಲಿ ಸಂಚಲನ ಸೃಷ್ಟಿಸಿದ ಸುದ್ದಿ

ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ಏಕಾಏಕಿ ಮಕ್ಕಳ ಮೇಲೆ ಹರಿದಿದೆ. ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದರು, ಆದರೆ ತುಳಸಿ (15) ಹಾಗೂ ನಿವೇದಿತ (14) ಸ್ಥಿತಿ ಗಂಭೀರವಾಗಿ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-06.09.2023
ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತುಳಸಿ, ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು-ಲತಾ ದಂಪತಿಯ ಪುತ್ರಿಯಾಗಿದ್ದಾಳೆ.
ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikkamagaluru: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ, ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್‍ನಲ್ಲಿ ಬುಧವಾರ ಸಂಜೆ ನಡೆದಿದೆ.
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನಿರಂಜನ್(47), ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‍ಗೆ ಢಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













