ಒಂದೇ ಕುಟುಂಬದ ಮೂವರು ಸಜೀವ ದಹನ ಪ್ರಕರಣ | ಚಿಕಿತ್ಸೆ ಪಡೆಯುತ್ತಿದ್ದ ಇನ್ನೊರ್ವ ವ್ಯಕ್ತಿ ಸಾವು

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಕೆಕೋಡಿನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭರತ್ ಎನ್ನುವ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ.

 

ಇದನ್ನೂ ಓದಿ; ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಏನಿದು ಘಟನೆ:
ಭಾನುವಾರದಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ನಡೆದಿತ್ತು. ಅರ್ಚಕರಾಗಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ಕೆಕೋಡ (65) ಪತ್ನಿ ನಾಗರತ್ನ (55) ಹಿರಿಯ ಪುತ್ರ ಶ್ರೀರಾಮ್ (30) ಎನ್ನುವವರು ಸಾವನ್ನಪ್ಪಿದ್ದರು.

 

ಇದನ್ನೂ ಓದಿ; ರಾಜ್ಯದಲ್ಲಿ ಪಟಾಕಿ ಬ್ಯಾನ್; ದೀಪಾವಳಿಗೂ ಪಟಾಕಿ ಹೊಡೀಬಾರದಾ?;  ಸಿದ್ದರಾಮಯ್ಯ ಹೇಳಿದ್ದೇನು?

ಕುಟುಂಬದ ಇನ್ನೊರ್ವ ಪುತ್ರ ಭರತ್ ಎನ್ನುವವರಿಗೆ ಗಂಭೀರ ಗಾಯವಾಗಿತ್ತು, ತೀರ್ಥಹಳ್ಳಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿತ್ತು. ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ದೇಹದ ಶೇ 60 ರಷ್ಟು ಸುಟ್ಟಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಭರತ್ ನಿನ್ನೆ (ಮಂಗಳವಾರ) ಸಾವನ್ನಪ್ಪಿದ್ದಾರೆ ಎಂದು ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

 

ಇದನ್ನೂ ಓದಿ; ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

ಈ ಪ್ರಕರಣಕ್ಕೆ ನಿಖರವಾದ ಕಾರಣ ಏನು ಎಂಬುದನ್ನು ತಿಳಿಸಬೇಕಿದ್ದ ಭರತ್ ಕೂಡ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಹೀಗಾಗಿ ಪೊಲೀಸರು ಪ್ರಕರಣದ ತನಿಖೆಯನ್ನು ಬೇರೆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸ್ಥಿತಿಯಲ್ಲಿದ್ದಾರೆ.

 

ಚಾರ್ಮಾಡಿ ಘಾಟ್‌ ತಿರುವುಗಳಿಗೆ ಬ್ರೇಕ್; ಅಭಿವೃದ್ಧಿ ಯೋಜನೆಗೆ ಕೇಂದ್ರದ ಹಸಿರು ನಿಶಾನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿ ರಸ್ತೆಯ ಚಾರ್ಮಾಡಿ ಹಳ್ಳದಿಂದ ಘಾಟಿಯ 11ನೇ ತಿರುವು ವರೆಗಿನ 11.2 ಕಿ.ಮೀ ಅಭಿವೃದ್ಧಿಯ 490 ಕೋಟಿ ವೆಚ್ಚದ ಕಾಮಗಾರಿಗೆ ಸಂಬಂಧಿಸಿದ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ.

ಈ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಯ ಮೊದಲ ಹಂತ ಬಂಟ್ವಾಳದ ಬಿ.ಸಿ ರೋಡ್ ನಿಂದ ಪುಂಜಾಲಕಟ್ಟೆವರೆಗೆ ಪೂರ್ಣಗೊಂಡಿದ್ದು ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ಕಾಮಗಾರಿ ಪ್ರಗತಿಯಲ್ಲಿದೆ. ಚಾರ್ಮಾಡಿ ಘಾಟಿಯಲ್ಲಿ ಮೂರನೇ ಹಂತದ ಈ ಕಾಮಗಾರಿಯ ಡಿಪಿಆರ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಚಾರ್ಮಾಡಿ ಘಾಟಿ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 25 ಕಿ.ಮೀ ವ್ಯಾಪ್ತಿ ಹೊಂದಿದೆ. ಈ ಪೈಕಿ ದಕ್ಷಿಣ ಕನ್ನಡ ಭಾಗದ 11.20 ಕಿ.ಮೀ. ರಸ್ತೆ ಅಭಿವೃದ್ಧಿ ಹೊಂದಲಿದೆ. ರಸ್ತೆ 10 ಮೀಟರ್ ಅಗಲವಾಗಲಿದೆ. 7,745 ಕೋಟಿ ವೆಚ್ಚದಲ್ಲಿ ದೇಶದ ಒಟ್ಟು 588 ಕಿ.ಮೀ ರಸ್ತೆಯ 21 ಯೋಜನೆಗಳ ಪ್ರಸ್ತಾವಕ್ಕೆ ಅನುಮೋದನೆ ಲಭಿಸಿದೆ. ಈ ಯೋಜನೆಗಳಲ್ಲಿ ಚಾರ್ಮಾಡಿ ಘಾಟಿಯ ಅಭಿವೃದ್ಧಿಯೂ ಸೇರಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಮೌಲಿಕ್ ಎ ತಿಳಿಸಿದರು.

ರಸ್ತೆ ಅಭಿವೃದ್ಧಿಯಿಂದ ಪ್ರಯಾಣಿಕರಿಗೆ ಅನುಕೂಲ:
ಸೌ೦ದರ್ಯದ ಜೊತೆ ಅಪಾಯಕಾರಿಯೂ ಆಗಿರುವ ಚಾರ್ಮಾಡಿ ಘಾಟಿ ಪರಿಸರದಲ್ಲಿ ಸಾಕಷ್ಟು ಗುಡ್ಡಗಳು, ಬಂಡೆಕಲ್ಲು, ಮರಗಳು ಇದ್ದು, ಇವೆಲ್ಲ ರಸ್ತೆಗೆ ಉರುಳಿ ಬೀಳುವುದು ಮಳೆಗಾಲದಲ್ಲಿ ಸಾಮಾನ್ಯವಾಗಿದೆ. ವಾಹನ ದಟ್ಟಣೆಯೂ ಅಧಿಕವಿರುವ ಕಾರಣ ಘಾಟ್ ಪರಿಸರದ ರಸ್ತೆ ಅಗಲೀಕರಣ ಅಗತ್ಯವಾಗಿತ್ತು. ರಸ್ತೆ ಅಭಿವೃದ್ಧಿಯಿಂದ ವಾಹನ ಸವಾರರು ಹಾಗೂ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.