ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ನದಿಗೆ ಹಾರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ಆತ್ಮಹತ್ಯೆ ಮಾಡಿಕೊಂಡ ಯುವಕ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ

ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ಡಿಗ್ರಿ ವಿದ್ಯಾಭ್ಯಾಸ ಮಾಡುತ್ತಿದ್ದ ಧ್ರುವ, ತೀರ್ಥಹಳ್ಳಿ ತಾಲೂಕಿನ ಮಾಲತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಮುಳುಗು ತಜ್ಞ ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರತಂದಿದ್ದು, ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ













