ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ)ಮಲೆನಾಡು ಭಾಗದಲ್ಲಿ ಕಳೆದೊಂದು ಗಂಟೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಜೊತೆಗೆ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಮಳೆಯೂ ಸುರಿದಿದೆ. ಏಕಾಏಕಿ ಆರಂಭವಾದ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಕೊಪ್ಪ ತಾಲೂಕಿನ ಕೊಗ್ರೆ ಭಾಗದಲ್ಲಿ ಭಾರೀ ಮಳೆ ಸುರಿದ ಪರಿಣಾಮ ಹಲವು ಕಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ಧರೆಗುರುಳಿದ್ದು, ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು. ಶೃಂಗೇರಿ–ಕೊಪ್ಪ ಮಾರ್ಗದ ಗುಡ್ಡೆತೋಟದ ಸಮೀಪ ಮರ ಬಿದ್ದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ವಾಹನಗಳು ರಸ್ತೆ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದವು. ಸ್ಥಳೀಯರು ಮತ್ತು ಅಧಿಕಾರಿಗಳು ಮರ ತೆರವು ಕಾರ್ಯಾಚರಣೆ ಮಾಡಿದ್ದಾರೆ.

ಅದೇ ರೀತಿ ಜಯಪುರ, ಬಾಳೆಹೊನ್ನೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಭಾರೀ ಮಳೆ ಸುರಿಯುತ್ತಿದೆ.(ವರದಿ: ಶಶಿ ಬೆತ್ತದಕೊಳಲು)
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!













