ಚಿಕ್ಕಮಗಳೂರು: ಕೈಕೊಟ್ಟ ಈರುಳ್ಳಿ ಬೆಳೆ | ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಈರುಳ್ಳಿ ಬೆಳೆ ನಾಶವಾದ ಹಿನ್ನಲೆ ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಸತೀಶ್ (48) ಆತ್ಮಹತ್ಯೆಗೆ ಶರಣಾದ ರೈತ.

 

ಮಳೆ ಕೊರತೆಯಿಂದ ಸಂಪೂರ್ಣ ಹಾಳಾದ ಈರುಳ್ಳಿ ಬೆಳೆಯಿಂದ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈರುಳ್ಳಿ ಬೆಳೆಗಾಗಿ ಕೈ ಸಾಲವನ್ನೂ ಮಾಡಿದ್ದ ಮೃತ ಸತೀಶ್, ಸಹಕಾರ ಸಂಘದಲ್ಲಿ 1 ಲಕ್ಷದ 30 ಸಾವಿರ ಹಾಗೂ ತಾಯಿ ಹೆಸರಲ್ಲಿ 1 ಲಕ್ಷ ಸಾಲ ಮಾಡಿದ್ದರು. ಮಳೆ ಇಲ್ಲದೆ ಒಣಗಿ ಹೋದ ಈರುಳ್ಳಿ ಬೆಳೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ;  ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ತಿದ್ದಂತೆ ಅಕೌಂಟ್ ಗೆ ಬಂತು ಹಣ; ನಿಮ್ಮ ಖಾತೆಗೆ ಬಂದಿಲ್ವಾ? ಚೆಕ್ ಮಾಡೋದು ಹೇಗೆ?

 

ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ;  ಉಚಿತ ಲ್ಯಾಪ್ ಟಾಪ್‌ಗಾಗಿ ಅರ್ಜಿ ಆಹ್ವಾನ

 


ಕೊಪ್ಪ: ವೈದ್ಯರ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು?

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ವೈಯಕ್ತಿಕ ಕಾರಣದಿಂದ ನೊಂದಿದ್ದ ಹಾಗೂ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿಯ ನೋಟಿಸ್‌ನಿಂದ ಬೇಸತ್ತ ಪ್ರಸೂತಿ ವೈದ್ಯರೊಬ್ಬರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದಲ್ಲಿ ವರದಿಯಾಗಿದೆ.

ಕೊಪ್ಪ ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿ ಕರ್ತವ್ಯದಲ್ಲಿದ್ದ ವೈದ್ಯ ಡಾ.ಸಂದೀಪ್ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ವೈದ್ಯನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

 

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-30.08.2023

ವೈದ್ಯ ಡಾ.ಸಂದೀಪ್ ಮದ್ಯವ್ಯಸನದ ದಾಸನಾಗಿದ್ದು, ಕರ್ತವ್ಯದ ವೇಳೆಯಲ್ಲೂ ಮದ್ಯಪಾನ ಮಾಡಿಕೊಂಡಿರುತ್ತಿದ್ದರು ಎಂದು ಆರೋಪಿಸಲಾಗಿದೆ. ಮದ್ಯಪಾನ ವ್ಯಸನಿಯಾಗಿದ್ದ ಡಾ.ಸಂದೀಪ್ ಪದೇಪದೇ ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಈ ಕಾರಣಕ್ಕೆ ಕೊಪ್ಪ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಗಾನವಿ ಅವರು ಡಾ.ಸಂದೀಪ್ ಅವರಿಗೆ ಹಲವು ಬಾರಿ ನೋಟಿಸ್ ನೀಡಿದ್ದರೆಂದು ತಿಳಿದು ಬಂದಿದೆ.

ಈ ಮಧ್ಯೆ ಡಾ.ಸಂದೀಪ್ ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದು ಬಂದಿದ್ದು, ಇದರಿಂದ ಬೇಸತ್ತ ಅವರು ಮಂಗಳವಾರ ಬೆಳಗ್ಗೆ ಬಾಳೆಹೊನ್ನೂರಿನಲ್ಲಿರುವ ತಮ್ಮ ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದು ಬಂದಿದೆ. ಸದ್ಯ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೈದ್ಯ ಡಾ.ಸಂದೀಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಇದನ್ನೂ ಓದಿ; BPL ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ;  ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.