ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಾಡೂರು ತಾಲೂಕಿನ ಹಿರೇನಲೂರು ಹೋಬಳಿಯ ಕೇದಿಗೆರೆ ಗ್ರಾಮದಲ್ಲಿ ನಡೆದಿದೆ. ಮಂಜುನಾಥ (38) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ.
ಇದನ್ನೂ ಓದಿ; ಕರ್ನಾಟಕದ ಕೆಲವು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಮಂಜುನಾಥ ತನ್ನ ತಂದೆಗೆ ಸೇರಿದ 2 ಎಕರೆ ಜಮೀನಿನಲ್ಲಿ, ವ್ಯವಸಾಯ ಮಾಡಿಕೊಂಡಿದ್ದ ಇತ್ತೀಚೆಗೆ ಸೂರ್ಯಕಾಂತಿ, ನೆಲಗಡಲೆ, ಈರುಳ್ಳಿ ಬೆಳೆಯಲು ವಿವಿಧ ಬ್ಯಾಂಕ್ ಹಾಗೂ ಫೈನಾನ್ಸ್ ಮತ್ತಿತರ ಕಡೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ, ಬೆಳೆ ಸರಿಯಾಗಿ ಬರದ ಕಾರಣ ಮನನೊಂದು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-17.10.2023
ಮೃತನ ಪತ್ನಿ ರೇಣುಕಮ್ಮ ನೀಡಿದ ದೂರಿನ ಆಧಾರದಲ್ಲಿ ಯಗಟಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೀರೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಶವಪರೀಕ್ಷೆ ನಡೆಸಿ ವರದಿ ನೀಡಿದ್ದಾರೆ.
ಚಿಕ್ಕಮಗಳೂರು: ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.
ಮೂಡಿಗೆರೆಯ ಗಂಗನ ಮಕ್ಕಿಯ ಪೆಟ್ರೋಲ್ ಬಂಕ್ ಸಮೀಪ ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಶವ ಮೂಡಿಗೆರೆ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
ಇನ್ನು ಈತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












