ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) 4 ವರ್ಷದ ಹೆಣ್ಣು ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ?; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಈ ಚಿರತೆ ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಸಂಚಾರ ಮಾಡುತ್ತಿದ್ದು, 8ಕ್ಕೂ ಹೆಚ್ಚು ನಾಯಿಗಳನ್ನು ಬೇಟೆಯಾಡಿ, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.
ಚಿರತೆ ಸಂಚಾರದಿಂದ ಆತಂಕಕ್ಕೆ ಒಳಗಾಗಿದ್ದ ಜನರು, ಮನೆಯಿಂದ ಹೊರ ಬರುವುದಕ್ಕೂ ಹಿಂದೇಟು ಹಾಕುತ್ತಿದ್ದರು. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಲಯ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿದಿರುವುದರಿಂದ ಜನರು ನಿಟ್ಟುಸಿರುಬಿಟ್ಟಿದ್ದಾರೆ.
ಇದನ್ನೂ ಓದಿ: ಸೂರ್ಯನಂತೆ ಹೊಳೆಯಲಿದೆ ಈ ರಾಶಿಯರ ಅದೃಷ್ಟ!; ಯಾವ ರಾಶಿಯವರಿಗೆ ಅದೃಷ್ಟ?












