ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕುಡಿದ ಮತ್ತಿನಲ್ಲಿ ಬಾರ್ನಲ್ಲಿ ಗಲಾಟೆ ನಡೆದು ಚಾಕು ಇರಿತ ಮಾಡಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಶಕ್ತಿನಗರದಲ್ಲಿ ನಡೆದಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಸಿಗರೇಟ್ ವಿಚಾರವಾಗಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಓರ್ವನಿಗೆ ಚಾಕು ಇರಿತ ಮಾಡಲಾಗಿದ್ದು, ಗಲಾಟೆ ದೃಶ್ಯ ಸಿಸಿ
ಕ್ಯಾಮರಾದಲ್ಲಿ ಸೆರೆಯಾಗಿದೆ.
ಗಲಾಟೆ ವೇಳೆ ಏಕಾಏಕಿ ಚಾಕುವಿನಿಂದ ಮೂಗ್ತಿಹಳ್ಳಿ ಗ್ರಾಮದ ಅನಿಲ್ ಕುಮಾರ್ ಎಂಬಾತನಿಗೆ ಇರಿಯಲಾಗಿದೆ. ಬಾರ್ ಒಳಗಿಂದ ಚಾಕು ತಂದ ಆರೋಪಿಯು ಇರಿದು ಎಸ್ಕೆಪ್ ಆಗಿದ್ದರು. ಗಂಭೀರವಾಗಿ ಗಾಯಗೊಂಡ ಅನಿಲ್ ಗೆ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ
ಚಾಕು ಇರಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












