ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರೆದಿದ್ದು, ಪ್ರವಾಸಿತಾಣಗಳಲ್ಲಿ ಹೊಡೆದಾಡಿಕೊಂಡಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಪ್ರಸಿದ್ಧ ಪ್ರವಾಸಿತಾಣ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ನಡೆದಿರುವ ಘಟನೆ ನಡೆದಿದೆ. ಕಾರು ಪಾರ್ಕಿಂಗ್ ವಿಚಾರವಾಗಿ ಶಿವಮೊಗ್ಗ, ಹಾವೇರಿ ಮೂಲದ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಎಣ್ಣೆ-ಗಾಂಜಾ ನಶೆಯಲ್ಲಿ ಹೊಡೆದಾಡಿಕೊಂಡ ಯುವಕರು:
ಇನ್ನೊಂದೆಡೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ.
ಎಣ್ಣೆ-ಗಾಂಜಾ ನಶೆಯಲ್ಲಿ ರೈಲ್ವೆ ನಿಲ್ದಾಣದ ಮುಂಭಾಗ 8-10 ಯುವಕರು ಸುಮಾರು ಅರ್ಧ ಗಂಟೆಗಳ ಕಾಲ ಹೊಡೆದಾಡಿಕೊಂಡಿದ್ದಾರೆ. ಮೈಮೇಲಿನ ಬಟ್ಟೆ ಹರಿದರೂ ಅರಿವಿಲ್ಲದೇ ನಾನಾ-ನೀನಾ ಅಂತ ಕೈ ಮಿಲಾಯಿಸಿಕೊಂಡಿದ್ದಾರೆ.
ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?












