ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಂಗಳೂರು–ಚಿಕ್ಕಮಗಳೂರು ಸಂಪರ್ಕಿಸುವ ಪ್ರಮುಖ ಚಾರ್ಮಾಡಿ ಘಾಟ್ನಲ್ಲಿ ಸರ್ಕಾರಿ ಬಸ್ ಹೌಸಿಂಗ್ ಕಟ್ಟಾಗಿ ರಸ್ತೆ ಮಧ್ಯೆ ನಿಂತ ಘಟನೆ ನಡೆದಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ

ಮಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್, ಚಾರ್ಮಾಡಿ ಘಾಟ್ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಬಳಿ ಹೌಸಿಂಗ್ ಕಟ್ಟಾಗಿ ರಸ್ತೆಯಲ್ಲೇ ನಿಂತಿದೆ. ಪರಿಣಾಮ ಚಾರ್ಮಾಡಿ ಘಾಟ್ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಎರಡೂ ದಿಕ್ಕುಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ಹಾಗೂ ವಾಹನ ಚಾಲಕರು ತೀವ್ರ ತೊಂದರೆ ಅನುಭವಿಸಿದರು.
ಇದನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10th & PUC ಪಾಸ್ ಆದವರು ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಹಾಗೂ ಮಂಗಳೂರು ಜಿಲ್ಲೆಗಳ ನಡುವಿನ ಪ್ರಮುಖ ಸಂಪರ್ಕ ರಸ್ತೆ ಆಗಿದ್ದು, ಇಂತಹ ಘಟನೆಗಳಿಂದ ಪ್ರಯಾಣಿಕರಿಗೆ ಸಮಸ್ಯೆ ಎದುರಾಗುತ್ತಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ರೇಷ್ಮೆ ಇಲಾಖೆಯಲ್ಲಿ ಸಿಗಲಿದೆ ಈ ಸಹಾಯಧನ; ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ












