ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಯೋಧ್ಯೆಯಲ್ಲಿ ಜ.22 ರಂದು ರಾಮ ಮಂದಿರ ಉದ್ಘಾಟನೆ, ಪ್ರತಿಷ್ಠಾಪನೆ ಪ್ರಯುಕ್ತ ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ರಾಮದೇವರ ಪ್ರತಿಷ್ಠಾಪನೆ ಹಾಗೂ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೀತಾರಾಮ ದೇವಸ್ಥಾನದ ಅಧ್ಯಕ್ಷ ಟಿ.ಎಂ.ಗಜೇಂದ್ರ ಗೌಡ ತಿಳಿಸಿದರು.
ಇದನ್ನೂ ಓದಿ; RBI ನಿಂದ ಉದ್ಯೋಗಾವಕಾಶ; ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್ಗಳ ನೇಮಕ

ಭಾನುವಾರ ಮಹಾ ಸಂಪರ್ಕ ಅಭಿಯಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇರುವುದರಿಂದ ಸರ್ವರಿಗೂ ಅಯೋಧ್ಯೆಗೆ ಹೋಗಲು ಸಾಧ್ಯವಾಗದೇ ಇರುವುದು. ಆದರಿಂದ ರಾಮ ಭಕ್ತರು ಎಲ್ಲರೂ ಒಗ್ಗಟ್ಟಿನಿಂದ ಸ್ಥಳೀಯ ಸೀತಾರಾಮ ದೇವಸ್ಥಾನದಲ್ಲಿ ರಾಮ ಜಪ, ಅನ್ನದಾನ, ಹೋಮ ಹವನಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಅನ್ನದಾನ ಮತ್ತಿತರ ಪೂಜಾ ಕಾರ್ಯಕ್ಕೆ ಜ.19, 20 ರ ಒಳಗಾಗಿ ಹೊರೆಕಾಣಿಕೆ ಹಾಗೂ ಅನ್ನದಾನಕ್ಕೆ ನೀಡುವ ಅಕ್ಕಿ ಮತ್ತಿತರ ವಸ್ತುಗಳನ್ನು ನೀಡಿ ಅಯೋಧ್ಯೆಯಲ್ಲಿ ನಡೆಯುವ ರಾಮನ ಪ್ರತಿಷ್ಠಾಪನೆಯ ಕಾರ್ಯ ಇಲ್ಲಿಯೂ ಸಂಭ್ರಮದಿಂದ ನಡೆಸಲು ಸಹಕರಿಸಬೇಕು. ರಾಮಮಂದಿರ ಉದ್ಘಾಟನೆ ಹಾಗೂ ಪ್ರತಿಷ್ಠಾಪನೆಯ ದಿನದಂದು ಭಕ್ತರೆಲ್ಲರೂ ತಮ್ಮ ಮನೆಯ ಮುಂದೆ ದೀಪ ಬೆಳಗಿಸಿ ರಾಮನ ಕೃಪೆಗೆ ಪಾತ್ರರಾಗಬೇಕು. ಅಂದು ಹೆಚ್ಚಿನ ಸಂಖ್ಯೆಯಲ್ಲಿ ಕೊಟ್ಟಿಗೆಹಾರ ಸೀತಾರಾಮ ದೇವಸ್ಥಾನದಲ್ಲಿ ನಡೆಯುವ ಪೂಜಾ ಕಾರ್ಯಕ್ಕೆ ಸರ್ವರೂ ಭಾಗವಹಿಸಬೇಕು ಎಂದರು.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
ಈ ಸಂದರ್ಭದಲ್ಲಿ ಟಿ.ಎಂ.ನರೇಂದ್ರ, ಸಂಜಯಗೌಡ, ಟಿ.ಎಂ.ಆದರ್ಶ್, ವಿಕ್ರಮ್ ಗೌಡ, ಅಶೋಕ ಮಲ್ಲಂದೂರು, ವಿನಯ್ ಮತ್ತಿತರರು ಇದ್ದರು. (ವರದಿ- ತನು ಕೊಟ್ಟಿಗೆಹಾರ)
ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿ
ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿಯಾಗಿರುವ ಘಟನೆ ಭಾನುವಾರ (ನಿನ್ನೆ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ












