ಮೂಡಿಗೆರೆ; ಸ್ಕೂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ; (ನ್ಯೂಸ್ ಮಲ್ನಾಡ್ ವರದಿ) ಸ್ಕೂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ರೈತ ಭವನ ಸಮೀಪ ನಡೆದಿದೆ.

 

ಇದನ್ನೂ ಓದಿ; ಕೊಪ್ಪದ ಕಾಡಿನಲ್ಲಿ ಮೂವರು ಯುವಕರ ಜೊತೆ ಕಳಸದ ಕಾಲೇಜು ವಿದ್ಯಾರ್ಥಿನಿ.!; ಹಿಂದು ಹುಡ್ಗಿ.. ಮುಸ್ಲಿಂ ಹುಡ್ಗುರು.. ವೈರಲ್ ಆಗ್ತಿರೋ ಸ್ಟೋರಿಗೆ ಬಿಗ್ ಟ್ವಿಸ್ಟ್

ಮೂಡಿಗೆರೆಯ ರೈತ ಭವನದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿದ್ದು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ.

 

ಇದನ್ನೂ ಓದಿ; 10 ನಿಮಿಷದಲ್ಲೇ ರೆಡಿಯಾಗುತ್ತೆ ಈ ಸ್ಪೆಷಲ್ ತಿಂಡಿ; ನೀವ್ಯಾಕೆ ಟ್ರೈ ಮಾಡ್ಬಾರ್ದು?

ಇನ್ನು ಈ ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Chikkamagaluru: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ, ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್‍ನಲ್ಲಿ ಬುಧವಾರ ಸಂಜೆ ನಡೆದಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-07.09.2023

 

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನಿರಂಜನ್(47), ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‍ಗೆ ಢಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಶಾಲಾ ಮಕ್ಕಳ ಮೇಲೆ ಹರಿದ ಬಸ್ | ಓರ್ವ ವಿದ್ಯಾರ್ಥಿನಿ ಸಾವು, ಒಬ್ಬರು ಗಂಭೀರ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ)  ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಚಲಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು, ಅದರಲ್ಲಿ ಓರ್ವ ವಿದ್ಯಾರ್ಥಿ ಇದೀಗ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ಬಳಿ ನಡೆದಿದೆ.

 

ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ಏಕಾಏಕಿ ಮಕ್ಕಳ ಮೇಲೆ ಹರಿದಿದೆ. ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದರು, ಆದರೆ ತುಳಸಿ (15) ಹಾಗೂ ನಿವೇದಿತ (14) ಸ್ಥಿತಿ ಗಂಭೀರವಾಗಿ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾಳೆ.

ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತುಳಸಿ, ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು-ಲತಾ ದಂಪತಿಯ ಪುತ್ರಿಯಾಗಿದ್ದಾಳೆ.

 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.