ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಒಂದು ಕಡೆ ಆದ್ರೆ ಇನ್ನೊಂದೆಡೆ ಕಾಡುಕೋಣಗಳ ಹಾವಳಿಯೂ ಜೋರಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಕೊಪ್ಪ ತಾಲೂಕಿನ ಬಸರಿಕಟ್ಟೆಯ ಕಾಫಿತೋಟದಲ್ಲಿ 50ಕ್ಕೂ ಅಧಿಕ ಕಾಡುಕೋಣಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳೀಯರು ಕಂಗಾಲಾಗಿದ್ದಾರೆ. ಕಾಫಿತೋಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾಡುಕೋಣಗಳು ಸಂಚರಿಸುತ್ತಿರುವ ದೃಶ್ಯ ಕಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಭಯಪಡುತ್ತಿದ್ದಾರೆ. ಕಾಡಾನೆಗಳ ಹಾವಳಿ ಇನ್ನೂ ಕಡಿಮೆಯಾಗದಿರುವಾಗಲೇ ಕಾಡುಕೋಣಗಳ ದಾಳಿ ಭೀತಿ ಹೆಚ್ಚಾಗಿದೆ.
ಇತ್ತೀಚೆಗೆ ಕೊಪ್ಪ ತಾಲೂಕಿನ ಮುಂಡೋಳು ಗ್ರಾಮದಲ್ಲಿ 55 ವರ್ಷದ ರೈತ ಶಿವಪ್ಪ ಮೇಲೆ ಕಾಡುಕೋಣ ದಾಳಿ ನಡೆಸಿತ್ತು. ಇದರಿಂದ ಕಾಫಿತೋಟ ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ.












