ಆನೆ ಕಾರ್ಯಾಚರಣೆ ವೇಳೆ ಭಾರೀ ದುರಂತವೊಂದು ತಪ್ಪಿರುವ ಘಟನೆ ನಡೆದಿದೆ.


ನಲ್ಲೂರಿನ ಕೆರೆ ಸಮೀಪದ ತೋಟದಲ್ಲಿ ಸುಮಾರು 7 ಆನೆಗಳ ಗುಂಪು ಇದ್ದು, ಇದರಲ್ಲಿ ಒಂದು ಒಂಟಿ ಸಲಗ ಆ ಗುಂಪಿನ ಜವಾಬ್ದಾರಿ ಹೊತ್ತಿದೆ, ಪಟಾಕಿ ಹಾಗೂ ಜನಗಳ ಶಬ್ದಕ್ಕೂ ಹೆದರದೆ, ಪಟಾಕಿ ಹೊಡೆದವರತ್ತ ಮುನ್ನುಗ್ಗುತ್ತಿದೆ.

ನಿನ್ನೆ ಅರಣ್ಯಧಿಕಾರಿಗಳ ಮೇಲೆ ದಾಳಿ ಕೂಡ ನಡೆಸಿದೆ. ಪುರುಷೋತ್ತಮ್ ಎಂಬ ಅರಣ್ಯ ಇಲಾಖೆ ಸಿಬ್ಬಂದಿ ಓಡುವಾಗ ಕೈಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ನಲ್ಲೂರು ಹಾಗೂ ಮತ್ತಾವರಕ್ಕೆ ಹೊಂದಿಕೊಂಡಿರುವ ಜನರು ತೋಟಗಳಿಗೆ ಹೋಗದೆ ಇರುವುದು ಉತ್ತಮ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಕೆಯನ್ನು ನೀಡಿದ್ದಾರೆ. ಸದ್ಯ ಆನೆಗಳು ಶಿರಗುಂದ, ದಂಬದಹಳ್ಳಿ ಭಾಗದಲ್ಲಿದೆ ಎನ್ನಲಾಗಿದೆ.

ಹುಲಿ ಉಗುರು ಹೊಂದಿದ್ದ ಆರೋಪ: ಎನ್ ಆರ್ ಪುರದಲ್ಲಿ DRFO ದರ್ಶನ್ ಅರೆಸ್ಟ್
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ಅದರಲ್ಲಿ ಕಳಸದ ಅರಣ್ಯಾಧಿಕಾರಿಯೊಬ್ಬ ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.
ಡಿ.ಆರ್.ಎಫ್.ಓ ದರ್ಶನ್ ವಿರುದ್ಧ ಹುಲಿ ಉಗುರು ಧರಿಸಿದ್ದ ದೂರು ಬಂದಿದ್ದು, ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಇಲಾಖೆ ಸೂಚಿಸಿತ್ತು. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೊಪ್ಪದ ಡಿ.ಎಫ್.ಓ ನಂದೀಶ್ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.
ಏನಿದು ಪ್ರಕರಣ:
ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಅರಣ್ಯ ರಕ್ಷಕರು, ವನ್ಯಜೀವಿ ರಕ್ಷಕರು ಎಂದು ಹೇಳಿಕೊಳ್ಳುವ ಅರಣ್ಯ ಅಧಿಕಾರಿಯೊಬ್ಬ ಹುಲಿ ಉಗುರಿನ ಡಾಲರ್ ಧರಿಸಿದ ಆರೋಪ ಕೇಳಿಬಂದಿತ್ತು. ಹುಲಿ ಉಗುರು ಧರಿಸಿದ ಆರೋಪದ ಹಿನ್ನಲೆ ಕಳಸದ ಡಿಆರ್ಎಫ್ಓ ದರ್ಶನ್ ಎಂಬಾತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿತ್ತು. ದರ್ಶನ್ ಹುಲಿಯ ಉಗುರಿನ ಡಾಲರ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಶೋಕಿ ಮಾಡಿದ್ದ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ದರ್ಶನ್ ಫೋಟೋ ಡಿಲಿಟ್ ಕೂಡ ಮಾಡಿದ್ದ.
ಕಾನೂನು ಎಲ್ಲರಿಗೂ ಒಂದೇ ಸಂತೋಷ್, ಮಾರ್ಕಂಡೇಯ ದೇವಸ್ಥಾನದ ಅರ್ಚಕರು ಸೇರಿದಂತೆ ಅಮಾಯಕರ ಮೇಲೆ ಕ್ರಮ ಕೈಗೊಳ್ಳುವ ಅರಣ್ಯ ಇಲಾಖೆಯವರು ಆರ್ಎಫ್ಒ ದರ್ಶನ್ ಮೇಲೆಯೂ ಕ್ರಮ ತೆಗೆದುಕೊಳ್ಳಬೇಕು ಎಂದು ದೂರುದಾರ ಸುಪ್ರೀತ್ ಈ ಬಗ್ಗೆ ತಿಳಿಸಿದ್ದ ಬೆನ್ನಲ್ಲೆ ನಿನ್ನೆ ನ್ಯೂಸ್ ಮಲ್ನಾಡ್ ವರದಿ ಕೂಡ ಮಾಡಿತ್ತು ಇದೀಗ ಎನ್.ಆರ್.ಪುರದಲ್ಲಿ ಬಂಧನ ಮಾಡಿ ಕೊಪ್ಪ ಡಿ.ಎಫ್.ಓ ಕಚೇರಿಗೆ ಕರೆ ತರಲಾಗಿದೆ.












