ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ; ಆದೇಶದ ಪ್ರತಿ ಇಲ್ಲಿದೆ ನೋಡಿ

ಪಶ್ಚಿಮ ಘಟ್ಟದಲ್ಲಿ ಶುರುವಾಗಿರುವ ಮಳೆ ಆರ್ಭಟದಿಂದ ಮಣ್ಣಿನ ಜರಿತ, ಮರ ಬಿರುಕು ಮುಂತಾದ ಪ್ರಕೃತಿ ಅಡಚಣೆಗಳ ಸಂಭವ ಹೆಚ್ಚಾಗಿದೆ. ಇಂದು ಬೆಳಿಗ್ಗೆ ಬೃಹತ್ ಮರ ಬಿದ್ದ ಕಾರಣ ನೂರಾರು ವಾಹನಗಳು ಕಿಮೀ ಗಳಷ್ಟು ದೂರ ಸಾಲಾಗಿ ನಿಂತಿದ್ದು, ವಾಹನ ಸವಾರರು ಹಾಗೂ ಪ್ರವಾಸಿಗರು ಪರದಾಡುವ ಸ್ಥಿತಿಯಲ್ಲಿದ್ದಾರೆ.
ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ;ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಒನ್ ಟೈಮ್ ನೋಂದಣಿ ಕಡ್ಡಾಯ
ಘಟನಾ ಸ್ಥಳಕ್ಕೆ ತಕ್ಷಣವೇ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ, ಮರವನ್ನು ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ.
ಈ ಘಾಟಿ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಗಡಿಭಾಗದಲ್ಲಿದ್ದು, ಹಲವು ವರ್ಷಗಳಿಂದ ಮಳೆ ಸಮಯದಲ್ಲಿ ಈ ರೀತಿಯ ಅಡಚಣೆಗಳು ಸಂಭವಿಸುತ್ತಲೇ ಇವೆ. ಸಂಬಂಧಪಟ್ಟ ಇಲಾಖೆಗಳಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪನೆ; ಹೈಕೋರ್ಟ್ ಆದೇಶ












