ಚಿಕ್ಕಮಗಳೂರು ನಗರದ ಹೊರವಲಯದ ಲಕ್ಯಾ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿ ಹಾಗೂ ಮಗು ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ಕಟ್ಟಿಗೆ ತುಂಬಿಕೊಂಡು ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರಿನ ಮೇಲೆಯೇ ಉರುಳಿ ಬಿದ್ದಿದೆ. ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣವಾಗಿ ಸಿಲುಕಿಕೊಂಡಿದ್ದು, ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ, ಕಾರಿನೊಳಗಿದ್ದ ದಂಪತಿ ಮತ್ತು ಮಗುವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ಅಪಘಾತದ ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ನಂತರ ಪೊಲೀಸರು ಮತ್ತು ಸ್ಥಳೀಯರ ಸಹಕಾರದಿಂದ ಸಂಚಾರವನ್ನು ಸರಾಗಗೊಳಿಸಲಾಯಿತು. ಲಾರಿ ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.
ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?












