ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದಂಡ ಹಾಕಿದ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಹಾಗೂ ಕಾರು ಮಾಲೀಕ ನಡು ರಸ್ತೆಯಲ್ಲಿ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.
ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿದ್ದರೆ ಅರ್ಜಿ ಸಲ್ಲಿಸಿ

ತೊಗರಿ ಹಂಕಲ್ ವೃತ್ತದಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದು, ಪೊಲೀಸರು ಇನ್ಸುರೆನ್ಸ್, ಎಮಿಷನ್ ಟೆಸ್ಟ್ ತಪಾಸಣೆ ನಡೆಸಿದ ವೇಳೆ ದಾಖಲೆ ಇಲ್ಲದ ಕಾರಣ ದಂಡ ಹಾಕಿ ಕೋರ್ಟಿನಲ್ಲಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಇದಕ್ಕೆ ಒಪ್ಪದ ಕಾರು ಮಾಲಿಕ ಭಾರದಿರಾಜ್ ದಂಡ ಕಟ್ಟುವುದಿಲ್ಲ ಎಂದು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದು, ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ; 10th, 12th ಪಾಸ್ ಆದವರಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್; ಈ ಷರತ್ತು ಕಡ್ಡಾಯ
ಅಲ್ಲದೆ ಜಗಳ ಬಿಡಿಸಲು ಹೋದ ಸ್ಥಳೀಯರ ಮೇಲೂ ಭಾರದೀರಾಜ್ ದಬ್ಬಾಳಿಕೆ ನಡೆಸಿದ್ದಾರೆ. ಪತ್ರಕರ್ತ ಒಬ್ಬರನ್ನು ನೂಕಿ ಕೆಳಗೆ ಬೀಳಿಸಿದ್ದಾರೆ, ಸದ್ಯ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಭಾರದೀರಾಜ್ ಮೇಲೆ ಪ್ರಕರಣ ದಾಖಲಾಗಿದೆ. ಕಾರನ್ನು ಸೀಜ್ ಮಾಡಿದ್ದಾರೆ.













