ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಟೌನ್ ವಲಯದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಅರಣ್ಯ ಇಲಾಖೆಯ ಹಂಗಾಮಿ ನೌಕರನಾಗಿ ಕೆಲಸ ಮಾಡುತಿದ್ದ ರಾಘವೇಂದ್ರ ಮದ್ಯವ್ಯಸಿಯಾಗಿದ್ದ. ಒಬ್ಬರೇ ಮನೆಯಲ್ಲಿ ವಾಸವಿದ್ದು, ಎರಡು ದಿನದಿಂದ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ನೋಡಿದಾಗ ಮೃತದೇಹ ಪತ್ತೆಯಾಗಿದೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ನಿಖರ ಕಾರಣ ತಿಳಿದುಬರಬೇಕಿದೆ.














