ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ತೋಟದಲ್ಲಿ ನಿಲ್ಲಿಸಿದ ಕಾರಿಗೆ ದಿಢೀರ್ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿಗೆ ಸೇರಿದ ಕೊನೋಡಿ ಗ್ರಾಮದ ಹೆಮ್ಮೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ಹೆಮ್ಮೂರು ಎಚ್. ಎಲ್. ಪರಮೇಶ್ವರ ಎಂಬ ರೈತರು ತಮ್ಮ ತೋಟದಲ್ಲಿ ಆಲ್ಟೋ ಕಾರು ನಿಲ್ಲಿಸಿ ತೋಟದ ಒಳಗೆ ಕೆಲಸ ಮಾಡುತ್ತಿದ್ದರು. ಮದ್ಯಾಹ್ನ 1 ಗಂಟೆಯ ಹೊತ್ತಿಗೆ ಕಾರಿನಲ್ಲಿದ್ದ ಊಟ ಕೊಂಡೊಯ್ಯಲು ಕಾರಿನ ಹತ್ತಿರ ಬರುತ್ತಿದ್ದಾಗ ಹೊಗೆ ಕಾಣಿಸಿಕೊಂಡು ತಕ್ಷಣ ಬೆಂಕಿ ಹೊತ್ತಿಕೊಂಡು ಕೆಲವೇ ನಿಮಿಷದಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಕಾರಿನಲ್ಲಿದ್ದ ಮೊಬೈಲ್, ಕಾರಿನ ದಾಖಲೆಗಳು ಸುಟ್ಟು ಭಸ್ಮವಾಗಿದ್ದು ಅಂದಾಜು 1.50 ಲಕ್ಷ ರೂ. ನಷ್ಟ ಉಂಟಾಗಿದೆ. (ವರದಿ- ಗುರು ಎಮ್. ಸಿ)

ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ













