ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ಸೇತುವೆಗೆ ಗುದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ; Bigg Boss Kannada:ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ರಿವೀಲ್!

ಭದ್ರಾವತಿಯಿಂದ ತರೀಕೆರೆಗೆ ಬರುತ್ತಿದ್ದ ಖಾಸಗಿ ಬಸ್, ಚಾಲಕನ ಅಜಾಗರೂಕತೆ ಹಾಗೂ ಅತಿಯಾದ ವೇಗದಿಂದ ಈ ಅಪಘಾತ ನಡೆದಿದೆ. ಬಾವಿಕೆರೆ ಗ್ರಾಮದ ಬಳಿ ಇರುವ ಈ ಸೇತುವೆ ಕಿರಿದಾಗಿದ್ದು, ಮತ್ತೊಂದು ಬಸ್ ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ. ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ವಿದ್ಯಾರ್ಥಿಗಳಿಗೆ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಮುಡಾ ಕೇಸ್: ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಜಾ
ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ರಾಜ್ಯದಲ್ಲಿ ಒನ್ ನೇಷನ್ ಒನ್ ಕಾರ್ಡ್ ಯೋಜನೆ ಜಾರಿ; ಏನಿದು? ಇಲ್ಲಿದೆ ನೋಡಿ












