ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡಿರುವ ಘಟನೆಯೊಂದು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಇದನ್ನೂ ಓದಿ; ಶಾಲಾ ಮಕ್ಕಳಿಗೆ ದಸರಾ ರಜೆ ವೇಳಾಪಟ್ಟಿ ಪ್ರಕಟ; ಎಷ್ಟು ದಿನ ರಜೆ, ಇಲ್ಲಿದೆ ಚೆಕ್ ಮಾಡಿ

ತರುವೆ ಗ್ರಾಮದ ಅಶೋಕ್ ಎಂಬ ವ್ಯಕ್ತಿಯಿಂದ 112 ಗೆ ಫೋನ್ ಮಾಡಿ ಸರ್… ಗಲಾಟೆ ಬೇಗ ಬನ್ನಿ ಅಂತ ಮನವಿ ಮಾಡಿದ್ದಾನೆ. ಇದರಿಂದ ಸ್ಥಳಕ್ಕೆ ಬಂದ ಪೊಲೀಸರಿಗೆ ಶಾಕ್ ಎಂಬಾತೆ ಪಿತೃ ಪಕ್ಷದ ಊಟಕ್ಕೆ ಹೋಗಲು ಮಾವನ ಮನೆಗೆ ಡ್ರಾಪ್ ಮಾಡುವಂತೆ ಮನವಿ ಮಾಡಿದ್ದಾನೆ.
ಇದನ್ನೂ ಓದಿ; ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5,000; ಯಾರಿಗೆ? ಇಲ್ಲಿದೆ ನೋಡಿ
ಗಾಡಿ ಯಾವು ಇಲ್ಲ. ಮಳೆ ಬೇರೆ, ಪಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡುವಂತೆ ರಿಕ್ವೆಸ್ಟ್ ಮಾಡಿದ್ದಾನೆ. ಯುವಕನ ಮಾತು ಕೇಳಿ ಪೊಲೀಸರಿಗೆ ಒಂದು ಕ್ಷಣ ಬೈಯ್ಯಬೇಕೋ… ನಗಬೇಕೋ… ತಿಳಿಯಲಿಲ್ಲ. ಮಾವನ ಮನೆಗೆ ಊಟಕ್ಕೆ ಹೊರಟಿದ್ದ ಅಶೋಕ್ ಗೆ ಪೊಲೀಸರು ಬುದ್ದಿವಾದ ಹೇಳಿದ್ದಾರೆ. ಕೊನೆಗೆ ಪೊಲೀಸರೇ ಲಾರಿ ಅಡ್ಡ ಹಾಕಿ ಆ ವ್ಯಕ್ತಿಯನ್ನ ಮಾವನ ಮನೆಗೆ ಕಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ; ಜ್ವರ ಬಂದ್ರೆ ಮಾತ್ರೆ ತಗೋತೀರಾ? ಹುಷಾರ್…!; ಪ್ಯಾರಸಿಟಮಲ್ ಸೇರಿ 53 ಔಷಧಗಳ ಗುಣಮಟ್ಟ ತಪಾಸಣೆಯಲ್ಲಿ ವಿಫಲ!












