ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಹೊರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಇಂದು ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ

ಮೊದಲು ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಆ ಕಾರಿನ ಹಿಂದೆ ಬರುತ್ತಿದ್ದ ಬೈಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನು ಗಾಯಗೊಂಡಿದ್ದು, ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ












