ಕಡೂರು: (ನ್ಯೂಸ್ ಮಲ್ನಾಡ್ ವರದಿ) ರಾಜಸ್ಥಾನದ ಬಿಕಾನೇರ್ನಲ್ಲಿ ಗಡಿ ಭದ್ರತಾ ಪಡೆಯ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜೋಡಿತಿಮ್ಮಾಪುರದ ಗಿರೀಶ್ (37) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸೇವಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

18 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರೀಶ್ ಅವರು ಶ್ರೀನಗರ, ಭೋಪಾಲ್, ಗುವಾಹಟಿ ಮತ್ತು ರಾಜಸ್ಥಾನಗಳಲ್ಲಿ ಸೇವೆ ಸಲ್ಲಿಸಿದ್ದರು. ಸೋಮವಾರ ಸಾಯಂಕಾಲ ಕರ್ತವ್ಯದಲ್ಲಿರುವಾಗ ವಾಂತಿ ಆದ ಕಾರಣ ವಿಶ್ರಾಂತಿಗೆ ತೆರಳಿದ್ದರು. ಬಳಿಕ ರಾತ್ರಿ ಕುಟುಂಬಸ್ಥರೊಂದಿಗೆ ವೀಡಿಯೋ ಕರೆ ಮಾಡಿ ಮಾತನಾಡಿ, ಏನೂ ಸಮಸ್ಯೆ ಇಲ್ಲ ಆರೋಗ್ಯವಾಗಿದ್ದೇನೆ. ಬೆಳಗ್ಗೆ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸುವೆ ಎಂದು ಮಾಹಿತಿ ನೀಡಿದ್ದರು. ಆದರೆ ಮಂಗಳವಾರ ಬೆಳಗ್ಗೆ ಬಿಎಸ್ಎಫ್ ಯುನಿಟ್ನವರು ಕುಟುಂಬದವರಿಗೆ ಕರೆ ಮಾಡಿ ಗಿರೀಶ್ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದು, ಸಾವಿಗೆ ಕಾರಣ ಈವರೆಗೆ ಖಚಿತವಾಗಿಲ್ಲ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












