ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಡಿಪ್ಲೊಮಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಜ್ಜವಳ್ಳಿ ಸರ್ಕಲ್ ಬಳಿ ಇಂದು ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಕೌಟ್ ನಿವಾಸಿ ಪ್ರಥಮ್ (16) ಮೃತಪಟ್ಟ ವಿದ್ಯಾರ್ಥಿ.
ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಡಿಪ್ಲೊಮಾ ವಿದ್ಯಾರ್ಥಿ ಆಗಿದ್ದ ಪ್ರಥಮ್ ಇಂದು ಬೆಳಗ್ಗೆ ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ. ಈ ವೇಳೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿ ಪ್ರಥಮ್ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ರವಾನಿಸಿದರು ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಡಿಕ್ಕಿಯಾದ ಪರಿಣಾಮ ಬಸ್ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; ಎರಡು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಈ ರೀತಿ ಚೆಕ್ ಮಾಡಿ












