ಕಳಸ: (ನ್ಯೂಸ್ ಮಲ್ನಾಡ್ ವರದಿ) ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಕಳಸಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಶನಿವಾರ ಬೆಳಿಗ್ಗೆಯೇ ಕಳಸಕ್ಕೆ ಆಗಮಿಸಿದ ಎನ್ಐಎ ಅಧಿಕಾರಿಗಳ ತಂಡ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮೇ ತಿಂಗಳ 1ರಂದು ಬಜಪೆಯ ಕಿನ್ನಿಪದವು ಎಂಬಲ್ಲಿ ಸುಹಾಶ್ ಶೆಟ್ಟಿ ಹತ್ಯೆಯಾಗಿತ್ತು.ಈ ಪ್ರಕರಣದಲ್ಲಿ 12 ಮಂದಿಯನ್ನು ಬಂಧಿಸಲಾಗಿತ್ತು. ಅದರಲ್ಲಿ ಕಳಸದ ರಂಜಿತ್ ಮತ್ತು ನಾಗರಾಜ್ ಇಬ್ಬರು ವ್ಯಕ್ತಿಗಳು ಕಳಸದವರಾಗಿದ್ದರು.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ
ಈ ಪ್ರಕರಣವನ್ನು ಕೇಂದ್ರ ಸರ್ಕಾರ ಎನ್ಐಎ ತನಿಖೆಗೆ ವಹಿಸಿರುವ ಕಾರಣ. ತನಿಖೆಯ ಅಂಗವಾಗಿ ಎನ್ಐಎ ತಂಡ ಶನಿವಾರ ಆರೋಪಿಗಳಾದ ನಾಗರಾಜ್ ಮತ್ತು ರಂಜಿತ್ ಮನೆಗೆ ಎನ್ಐಎ ತಂಡ ಬಂದು ಪರಿಶೀಲಿಸಿದೆ. ಇನ್ನು ಆರೋಪಿಗಳಿಬ್ಬರು ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿದ್ದಾರೆ.












