ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ನಲ್ಲೂರು ಗೇಟ್ ಬಳಿ ನಡೆದಿದೆ. ಚಂದ್ರಶೇಖರ್ (38) ರಾಘವೇಂದ್ರ (40) ಸ್ಥಾನದಲ್ಲೇ ಮೃತಪಟ್ಟ ದುರ್ದೈವಿಗಳು.


ಮೂಡಿಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲೂರು ಗೇಟ್ ಬಳಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿದೆ ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆಟೋ ಚಾಲಕ ಸೇರಿದಂತೆ ಮತ್ತೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಾದ ಇಬ್ಬರು ಚಿಕ್ಕಮಗಳೂರು ತಾಲೂಕಿನ ಮಲ್ಲೇದೇವರಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಚಿಕ್ಕಮಗಳೂರು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ; ಗೂಗಲ್ ಪೇ, ಫೋನ್ ಪೇ ಬಳಸುತ್ತಿದ್ದರೆ ಕೂಡಲೇ ಈ ಸ್ಟೋರಿ ಓದಿ; ಸೈಬರ್ ಕ್ರೈಂ ಪೊಲೀಸರಿಂದ ಎಚ್ಚರಿಕೆ












