ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಹೈ ವೋಲ್ವೇಜ್ ವಿದ್ಯುತ್ ತಂತಿತಾಗಿ ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಬೆಂಕಿ ಹತ್ತಿ ಧಗಧಗ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಡೆದಿದೆ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ

ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪ ಇಂದು (ಶನಿವಾರ) ಬೆಳಿಗ್ಗೆ 4.30ರ ವೇಳೆಗೆ ಹೈ ವೋಲ್ವೇಜ್ ಲೈನ್ ತಾಗಿ ಬೆಂಕಿ ಹತ್ತಿಕೊಂಡಿದೆ. ಸ್ಥಳೀಯರು ಅಗ್ನಿಶಾಮಾಕ ಇಲಾಖೆಗೆ ತಿಳಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದುಬಂದಿದೆ.
ಶೃಂಗೇರಿ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಹಬ್ಬಕ್ಕೆ ಮನೆಗೆ ತೆರಳಿದ್ದಾಗ ಪಾಲಕರು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶೃಂಗೇರಿಯಲ್ಲಿ ದ್ವಿತೀಯ ಬಿ.ಕಾಮ್ ವ್ಯಾಸಂಗ ಮಾಡುತಿದ್ದ, ಅವರು ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದರು. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಮನೆಯಲ್ಲಿ ವಿಷ ಸೇವಿಸಿದ್ದಾಳೆ. ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಚಿಕ್ಕಮಗಳೂರು: ರಕ್ತ ಕೊಡ್ತೀವಿ, ನೀರು ಕೊಡಲ್ಲ ಎಂದು ಕೈ ಕೊಯ್ದುಕೊಂಡ ಹೋರಾಟಗಾರ
ಕಳಸ: (ನ್ಯೂಸ್ ಮಲ್ನಾಡ್ ವರದಿ) ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ, ಪ್ರತಿಭಟನೆ ವೇಳೆ ಹೋರಾಟಗಾರ ಏಕಾಏಕಿ ಕೈಕೊಯ್ದುಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.
ರೈತ ಸಂಘ, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು, ಪ್ರತಿಭಟನೆ ವೇಳೆ ಕನ್ನಡ ರಾಜು ಏಕಾಏಕಿ “ರಕ್ತ ಕೊಡ್ತೀವಿ, ನೀರು ಕೊಡಲ್ಲ” ಎಂದು ಕೈ ಕೊಯ್ದುಕೊಂಡಿದ್ದಾರೆ. ಕೂಡಲೇ ಸ್ಥಳಿಯರು ಕನ್ನಡ ರಾಜುನನ್ನು ಆಸ್ಪತ್ರೆಗೆ ಕಡೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ












