ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಯಾಣಿಸುತ್ತಿದ್ದ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಮತ್ತೊಂದು (ಬೆಂಗಾವಲು) ಕಾರಿಗೆ ಲಾರಿ ಗುದ್ದಿದ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…

ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ಬಸವತತ್ವ ಪೀಠದಲ್ಲಿ ಆಯೋಜಿಸಿದ್ದ ಬಸವತತ್ವ ಸಮಾವೇಶದಲ್ಲಿ ಪಾಲ್ಗೊಂಡು ಶಿವಮೊಗ್ಗಕ್ಕೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಸದ್ಯ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಚಾಲಕನ ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್ ಆದ ಜನ…












