
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮದುವೆಗೆ ಹೆಣ್ಣು ಸಿಗದ ಕಾರಣ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಭೈರಗೊಂಡನಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುಮಾರ್ (26) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಕುರಿಗಾಹಿ ವೃತ್ತಿ ಮಾಡುತ್ತಿದ್ದ ಈತನಿಗೆ ಕಳೆದ ಕೆಲವು ವರ್ಷಗಳಿಂದ ಮನೆಯವರು ಹೆಣ್ಣು ಹುಡುಕುತ್ತಿದ್ದರೂ ಯಾವುದೇ ಸಂಬಂಧ ಕೂಡಿ ಬಂದಿರಲಿಲ್ಲ. ಇದರಿಂದ ತೀವ್ರ ಹತಾಶೆಗೆ ಒಳಗಾಗಿದ್ದ ಕುಮಾರ್, ಕುಡಿದ ಮತ್ತಿನಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ.

ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!













