ತರೀಕೆರೆ: ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ. ಹೈದರಾಬಾದ್ ಮೂಲದ ಯುವಕ ಶ್ರವಣ್ (25) ಮೃತ ದುರ್ದೈವಿ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಹೈದರಾಬಾದ್ ನಿಂದ ಕಾಫಿನಾಡಿಗೆ ಪ್ರವಾಸ ಕೈಗೊಂಡಿದ್ದ ಇಬ್ಬರು ಯುವಕರು, ಇಂದು ಬೆಳಿಗ್ಗೆ ಬೈಕ್ ನಲ್ಲಿ ಹೆಬ್ಬೆ ಫಾಲ್ಸ್ ಗೆ ತೆರಳಿದ್ದಾರೆ. ಹೆಬ್ಬೆ ಫಾಲ್ಸ್ ನಲ್ಲಿ ಸೆಲ್ಫಿ ತೆಗೆಯುವ ವೇಳೆ ಬಂಡೆ ಮೇಲಿಂದ ಕಾಲು ಜಾರಿ ಬಿದ್ದು ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ.


ಇದನ್ನೂ ಓದಿ: ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು


ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಹೆಚ್ಚಿಸಿದ ಸರ್ಕಾರ


ಕೊಟ್ಟಿಗೆಹಾರದಲ್ಲಿ ಬೇಕಾಬಿಟ್ಟಿ ಪಾರ್ಕಿಂಗ್, ಪ್ರಯಾಣಿಕರಿಗೆ ತೊಂದರೆ

ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಪ್ರವಾಸಿ ತಾಣವಾಗಿದ್ದು, ಇಲ್ಲಿಗೆ ಪ್ರವಾಸಿಗರು ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಪ್ರಯಾಣಿಕರು ಹಾಗೂ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕೊಟ್ಟಿಗೆಹಾರವು ಹೊರನಾಡು, ಧರ್ಮಸ್ಥಳ, ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ವಾರಾಂತ್ಯದಲ್ಲಿ ಈ ಪ್ರದೇಶ ಜನರಿಂದ ತುಂಬಿ ತುಳುಕುತ್ತಿರುತ್ತದೆ. ಆದರೆ, ಇಲ್ಲಿಗೆ ಬರುವ ಪ್ರವಾಸಿಗರು ನಗರದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವಂತೆ ಈ ಭಾಗದಲ್ಲೂ ಪಾರ್ಕಿಂಗ್ ಮಾಡಿ ಸಾಗುತ್ತಾರೆ. ಆದರೆ, ಇತರೆ ವಾಹನಗಳಿಗೆ ಇದರಿಂದ ತೊಂದರೆಯಾಗುತ್ತಿದೆ. ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ. ಆದರೆ, ಪೋಲಿಸರು ಕಾಣುತಿಲ್ಲ. ವಾಹನಗಳ ಪಾರ್ಕಿಂಗ್ ಬಗ್ಗೆ ಪ್ರವಾಸಿಗರು ಹೆಚ್ಚು ಗಮನ ಹರಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

“ಪ್ರವಾಸಿಗರು ವಾಹನ ನಿಲುಗಡೆ ಬೇಕಾಬಿಟ್ಟಿ ರಸ್ತೆ ಮಧ್ಯದಲ್ಲಿಯೇ ನಿಲ್ಲಿಸಿ ಹೋಟೆಲ್ ಅಂಗಡಿಗೆ ತೆರಳುತ್ತಾರೆ. ಇದರಿಂದ ಇನ್ನಿತರ ವಾಹನಗಳಿಗೆ ಹಾಗೂ ಪಾದಚಾರಿಗಳಿಗೆ ತುಂಬಾ ತೊಂದರೆಯಾಗುತ್ತದೆ. ವಾರದಲ್ಲಿ ಶನಿವಾರ ಹಾಗೂ ಭಾನುವಾರ ಪ್ರವಾಸಿಗರು ಹೆಚ್ಚು ಇರುವುದರಿಂದ ಈ ಎರಡು ದಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಪೊಲೀಸರನ್ನು ನಿಯೋಜಿಸಬೇಕು.”– ಸಂಜಯ್ ಗೌಡ ಕೊಟ್ಟಿಗೆಹಾರ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.