ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ತುಂಗಾ ನದಿಯಲ್ಲಿ ಕಾಲು ಜಾರಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ.

 

ಇದನ್ನೂ ಓದಿ; 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ

ತೀರ್ಥಹಳ್ಳಿ ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ. ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಬಳಿಕ ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಮೂಡಿಗೆರೆ: ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ಮಲಗಿದ ಭೂಪ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ವ್ಯಕ್ತಿಯೋರ್ವ ಮಲಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ನಡೆದಿದೆ.

 

ಇದನ್ನೂ ಓದಿ; ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ

ರಸ್ತೆಯಲ್ಲಿ ವ್ಯಕ್ತಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದು, ವಾಹನ ಚಾಲಕರು ಎಷ್ಟೇ ಹಾರ್ನ್ ಮಾಡಿದರೂ ಮೇಲಕ್ಕೆ ಏಳದ ಭೂಪ, ಕೆಲ ಕಾಲ ಆತಂಕ ಸೃಷ್ಟಿಸಿದ್ದಾನೆ. ವಾಹನದ ಹಾರ್ನ್ ಗೆ ಕೊನೆಗೂ ಎದ್ದ ವ್ಯಕ್ತಿ, ವಾಹನ ಹೋದ ನಂತರ ಮತ್ತೆ ಅದೇ ಜಾಗದಲ್ಲಿ ಮಲಗಿದ್ದಾನೆ. ವ್ಯಕ್ತಿಯ ಹುಚ್ಚಾಟದಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಇದನ್ನೂ ಓದಿ; ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?

ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.